Advertisement
ವಕ್ಫ್ ಬೋರ್ಡ್ ಆಸ್ತಿ ದಾನ ಕೊಟ್ಟಿರುವುದು ಮಿಸ್ಟರ್ ಯತ್ನಾಳ್ ಇದು ನಿಮ್ಮಪ್ಪನ ಆಸ್ತಿಯೂ ಅಲ್ಲ, ನನ್ನಪ್ಪನ ಆಸ್ತಿಯೂ ಅಲ್ಲ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತ್ಯುತ್ತರ ನೀಡಿ ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ ಪರಿಕಲ್ಪನೆ ಕಾನೂನು ಅಸಾಂವಿಧಾನಿಕ, ಕಾನೂನು ಬಾಹಿರ ಎಂದು ಟಾಂಗ್ ನೀಡಿದ್ದಾರೆ.
ಸೋಮವಾರ ವಿಜಯಪುರದಲ್ಲಿ ಸಚಿವ ಜಮೀರ್ ನೀಡಿದ ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಕ್ಸ್ ಖಾತೆಯಲ್ಲಿ ತಿರುಗೇಟು ನೀಡಿ ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ. ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ ಪರಿಕಲ್ಪನೆ, ಕಾನೂನು ಅಸಂವಿಧಾನಿಕ ಹಾಗೂ ಕಾನೂನು ಬಾಹಿರ. ಜಮೀರ್ ಅವರೇ, ದೇಣಿಗೆ ಪಡೆದು ಇಂದು ವಕ್ಫ್ ಬೋರ್ಡ್ ಭಾರತದ ಮೂರನೇ ಅತಿದೊಡ್ಡ ಭೂ ಒಡೆಯ ಆಗಿದೆಯಾ ? ಇದನ್ನು ನಂಬುವುದಕ್ಕೆ ಸಾಧ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ. ಮುಸ್ಲಿಂ ಬಾಹುಳ್ಯ ದೇಶಗಳಲ್ಲೇ ವಕ್ಫ್ ಕಾಯ್ದೆ ಇಲ್ಲ:
ವಕ್ಫ್ ನಿಂದ ಆರ್ಥಿಕ ಸಮಾನತೆ ಸಾಧ್ಯವಿದೆಯೇ ? ಅಸಲೀಗೆ, ವಕ್ಫ್ ನಂತ ಕಾಯ್ದೆ ಮುಸ್ಲಿಂ ಬಾಹುಳ್ಯ ದೇಶಗಳಲ್ಲೇ ಇಲ್ಲ, ಇನ್ನು ಜಾತ್ಯತೀತ ದೇಶವಾದ ಭಾರತದಲ್ಲಿ ಏಕೆ ಬೇಕು ? ರೋಷಾವೇಶದಿಂದ ಟೀಕೆ ಮಾಡುವ ಮುನ್ನ ಸತ್ಯಾಸತ್ಯತೆ ಪರಾಮರ್ಶಿಸಿ. ಜಾತ್ಯತೀತ ರಾಷ್ಟ್ರದಲ್ಲಿ ವಕ್ಫ್ ಕಾನೂನುಗಳು ಅರಾಜಕತೆ ಉಂಟುಮಾಡುತ್ತದೆ ಎಂಬುದನ್ನು ತಿಳಿಯಿರಿ.
Related Articles
Advertisement