Advertisement

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

01:40 AM Nov 05, 2024 | Esha Prasanna |

ವಿಜಯಪುರ: ವಕ್ಫ್ ಅವಾಂತರದ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ವಿಜಯಪುರದಲ್ಲಿ ಕಿಸಾನ್‌ ಸಂಘದ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಸುಮಾರು 35 ಸ್ವಾಮೀಜಿಗಳು ಸಾಥ್‌ ನೀಡಿದ್ದು ಪ್ರತಿಭಟನೆ ಮತ್ತಷ್ಟು ಕಾವೇರಿದೆ.

Advertisement

ನಗರದ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಪ್ರತಿಭಟನೆಯ ವೇದಿಕೆಯಲ್ಲಿ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಕೂಡಲಸಂಗಮದ ಪಂಚಮಸಾಲಿ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಪಂಚಮಸಾಲಿ ಜಗದ್ಗುರು ಡಾ. ಮಹಾದೇವ ಶಿವಾಚಾರ್ಯರು, ಯರನಾಳ ವಿರಕ್ತಮಠದ ಗುರು ಸಂಗನಬಸವ ಶಿವಾಚಾರ್ಯರು, ಬುರಾಣಪುರದ ಯೋಗೇಶ್ವರಿ ಮಾತಾಜಿ ಸೇರಿದಂತೆ ಹಲವು ಸ್ವಾಮೀಜಿಗಳು ಇದ್ದರು.

ವೇದಿಕೆ ಕೆಳಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ರಮೇಶ ಜಿಗಜಿಣಗಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಮುಖಂಡರು ಕುಳಿತಿದ್ದರು. ಕನೇರಿ ಶ್ರೀ, ಜಯಮೃತ್ಯುಂಜಯ ಶ್ರೀಗಳು ವಕ್ಫ್ ವಿರುದ್ಧ ಗುಡುಗಿ, ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ವಕ್ಫ್ ಕುರಿತ ಎಲ್ಲ ಗೆಜೆಟ್‌ಗಳನ್ನು ರದ್ದು ಮಾಡಬೇಕು. ಸಚಿವ ಜಮೀರ್‌ ಅಹ್ಮದ್‌ ರಾಜೀನಾಮೆ ಪಡೆಯಬೇಕು. ವಕ್ಫ್ ಕಾಯ್ದೆ ಸಂಪೂರ್ಣ ತೊಲಗಬೇಕು ಎಂದು ಆಗ್ರಹಿಸಿದರು. ಯತ್ನಾಳ ಅಹೋ ರಾತ್ರಿ ಧರಣಿ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next