Advertisement

Waqf Property: 2019ರಲ್ಲೇ ಗದಗ ಹಾಲಕೆರೆ ಮಠದ 11.19 ಎಕರೆ ವಕ್ಫ್‌ಗೆ!

02:09 AM Nov 05, 2024 | Team Udayavani |

ಗದಗ: ಹಾಲಕೆರೆ ಶ್ರೀ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ಮಾತೃ ಸಂಸ್ಥೆಯಡಿ ನಡೆಯುತ್ತಿರುವ ಕೆವಿ ಮತ್ತು ಬಿಎಂ ಉಚಿತ ಪ್ರಸಾದ ನಿಲಯದ ಒಟ್ಟು 15.06 ಎಕರೆಯಲ್ಲಿ 11.19 ಎಕರೆ ವಕ್ಫ್ ಆಸ್ತಿ ಎಂದು ನಮೂದಾಗಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

Advertisement

ಸ್ವಾತಂತ್ರ್ಯ  ಪೂರ್ವದಲ್ಲಿಯೇ ಶಿಕ್ಷಣ ಸಂಸ್ಥೆ ಆರಂಭಿಸಿದ ಈ ಸಂಸ್ಥೆಯ ಉಚಿತ ಪ್ರಸಾದ ನಿಲಯದ ಸರ್ವೇ ನಂ: 410/2ಬಿ ಆಸ್ತಿಯಲ್ಲಿ ರೆಹಮಾನ ಶಾವಲಿ ದರ್ಗಾ ವಕ್ಫ್  ಆಸ್ತಿ ಎಂದು ನೋಂದಣಿಯಾಗಿದೆ. ಲಿಂ| ಡಾ| ಅಭಿನವ ಅನ್ನದಾನ ಮಹಾಸ್ವಾಮಿಗಳು ಶ್ರೀಮಠದ ಪೀಠಾಧಿಪತಿಗಳಾಗಿದ್ದ ವೇಳೆ 2019-2020ರಲ್ಲಿ ಪಹಣಿಯ ಕಾಲಂ ನಂ. 11ರಲ್ಲಿ ರೆಹಮಾನ ಶಾವಲಿ ದರ್ಗಾ ವಕ್ಫ್ ಆಸ್ತಿ ಎಂದು ಸೇರ್ಪಡೆಯಾಗಿದೆ.

ಲಿಂ. ಶ್ರೀ ಗುರು ಅನ್ನದಾನ ಸ್ವಾಮಿಗಳು ಕೋಡಿಕೊಪ್ಪದಲ್ಲಿ 1956ರಲ್ಲಿ ವೀರಪ್ಪಜ್ಜನವರ ಹಾಗೂ ಬಾಗಲಕೋಟೆ ಮಲ್ಲಣಾರ್ಯರ ಉಚಿತ ಪ್ರಸಾದ ನಿಲಯ ಆರಂಭಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next