Advertisement
ವಿಜಯಪುರ ಜಿಲ್ಲೆಯ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನೋಟಿಸ್ ಹಿಂಪಡೆಯಲಾಗುವುದು ಅಲ್ಲದೆ ತಪ್ಪಿನ ಬಗ್ಗೆ ವಿಚಾರಿಸಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ರಾಜಿನಾಮೆಗೆ ಬಿಜೆಪಿ ಪಟ್ಟು ಹಿಡಿದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಜಮೀರ್ ಯಾಕೆ ರಾಜೀನಾಮೆ ಕೊಡಬೇಕು? ತಹಶೀಲ್ದಾರ್ ತಪ್ಪು ಮಾಡಿರೋದು. ತಹಶೀಲ್ದಾರ್ ನೋಟಿಸ್ ಕೊಟ್ಟಿದ್ರೆ ಅದನ್ನು ಜಿಲ್ಲಾಧಿಕಾರಿ ನೋಡ್ತಾರೆ. ಅದಕ್ಕೂ ಮೇಲೆ ಸರ್ಕಾರ ಇದೆ. ಹೀಗಿರುವಾಗ ಜಮೀರ್ ಯಾಕೆ ರಾಜೀನಾಮೆ ನೀಡಬೇಕು? ಎಂ.ಬಿ ಪಾಟೀಲ್ ಎಲ್ಲಾ ಗೊಂದಲಗಳ ನಿವಾರಿಸುತ್ತಿದ್ದಾರೆ. ಈಗ ಯಾವುದೇ ಗೊಂದಲ ಇಲ್ಲ. ರೈತರ ಭೂಮಿಯನ್ನು ವಕ್ಫ್ ಆಸ್ತಿಯಾಗಿ ಪರಿವರ್ತಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ. ತಪ್ಪಿದಲ್ಲಿ ಅದನ್ನು ಸರಿಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
Related Articles
Advertisement
ವಕ್ಫ್ ಬೋರ್ಡ್ ಇಂಡೀಕರಣ ನಿಲ್ಲಿಸಿ: ಯತ್ನಾಳ್ವಕ್ಫ್ ಮಂಡಳಿ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದ ಕಾನೂನು ಸಚಿವ ಎಚ್.ಕೆ.ಪಾಟೀಲ್ ಹೇಳಿಕೆಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ ನಮ್ಮ ಹೋರಾಟ ಪ್ರಾರಂಭ ಆಗುವ ಮುಂಚೆಯೇ ರಾಜ್ಯ ಸರ್ಕಾರ ಶರಣಾಗಿದೆ. ಆದರೆ, ನೋಟಿಸ್ ವಾಪಸ್ ಪಡೆಯುವುದರೊಂದಿಗೆ ಪಹಣಿಯಲ್ಲಿ ವಕ್ಫ್ ಬೋರ್ಡ್ ಇಂಡೀಕರಣ ತೆಗೆದು ಹಾಕಬೇಕು. ಇವೆಲ್ಲ ಪ್ರಕ್ರಿಯೆಯ ನ. 3ರೊಳಗೆ ಮುಗಿಸಿದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಆಗುವುದು ನಿಶ್ಚಿತ ಎಂದು ತಿಳಿಸಿದ್ದಾರೆ.