Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ನವರು ಜಮೀರ್ ಮಾಡುತ್ತಿರುವ ಕೆಲಸ ನೋಡುತ್ತಿಲ್ಲವೇ? ರಾಜ್ಯಾದ್ಯಂತ ಸಂಚರಿಸಿ ಅ ಧಿಕಾರಿಗಳ ಮೇಲೆ ದಬ್ಟಾಳಿಕೆ, ಗೂಂಡಾಗಿರಿ ಮಾಡುತ್ತಿದ್ದಾರೆ. ಮಠ-ಮಾನ್ಯಗಳು, ರೈತರ ಜಮೀನನ್ನು ವಕ್ಫ್ ಬೋರ್ಡ್ ಮೂಲಕ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಗೊಂದಲ ಸೃಷ್ಟಿ ಮಾಡಿದರೆ, ಸಚಿವ ಜಮೀರ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ದಿನೇದಿನೆ ಉಪಚುನಾವಣೆ ಕಾವು ಹೆಚ್ಚಾಗುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಅನಂತರ ಅಹಿಂದ ಎಂದು ಹೇಳಿಕೊಳ್ಳುತ್ತಲೇ ಹಿಂದ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳು ಬಹುತೇಕ ನಿಂತು ಹೋಗಿವೆ. ಆಡಳಿತ ಪಕ್ಷದ ಶಾಸಕರೇ ಛೀಮಾರಿ ಹಾಕುತ್ತಿದ್ದಾರೆ. ಕಳೆದ 2 ವರ್ಷದಲ್ಲಿ ಮುಖ್ಯಮಂತ್ರಿಗಳು ಯಾವುದೇ ಕ್ಷೇತ್ರಕ್ಕೂ ಅನುದಾನ ನೀಡಿಲ್ಲ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.