Advertisement

Waqf Property: ವಿಪಕ್ಷದಿಂದ ವಕ್ಫ್ ಆಸ್ತಿ ಹೆಸರಿನಲ್ಲಿ ಅಶಾಂತಿ ಮೂಡಿಸಲು ಯತ್ನ: ಭಂಡಾರಿ

03:04 AM Oct 30, 2024 | Team Udayavani |

ಬೆಂಗಳೂರು: ಶಾಂತಿಯುತ ನಾಡಿನಲ್ಲಿ ವಿಪಕ್ಷದವರು ಅಶಾಂತಿಯ ವಾತಾವರಣ ಸೃಷ್ಟಿಸಲು ಮುಂದಾಗಿದ್ದಾರೆ. ಜನಾಂಗದ ನಡುವೆ ದ್ವೇಷದ ವಿಷಬೀಜ ಬಿತ್ತುತ್ತಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವವರು ಹಾಗೂ ದ್ವೇಷ ಬಿತ್ತುವವರ ವಿರುದ್ಧ ಸರ್ಕಾರ ಕಠಿನ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿ ಆಗ್ರಹಿಸಿದ್ದಾರೆ.

Advertisement

ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಪ್ರತಿ ಜಾತಿ, ಜನಾಂಗದ ಹಿತ ಕಾಪಾಡುತ್ತಾ ಬಂದಿದೆ. ಸಾಮರಸ್ಯಕ್ಕೆ ಧಕ್ಕೆಯಾಗುವುದಕ್ಕೆ ಆಸ್ಪದ ಕೊಟ್ಟಿಲ್ಲ. ಆದರೆ ಮಹಾರಾಷ್ಟ್ರ ಚುನಾವಣೆ ಹಾಗೂ ರಾಜ್ಯದ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ವಿಪಕ್ಷದವರು ರಾಜ್ಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ಕೋಮು ಸೌಹಾರ್ದ ಕದಡುವ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ದೂರಿದ್ದಾರೆ.

ಶಾಂತಿ ಕದಡುವ ಯತ್ನಕ್ಕೆ ಕಾಂಗ್ರೆಸ್‌ ಸರಕಾರ ಅವಕಾಶ ನೀಡುವುದಿಲ್ಲ. ಶಾಂತಿ ಸುವ್ಯವಸ್ಥೆ ಕಾಪಾಡಲು ಸರಕಾರ ಮುಂದಾಗಿದೆ. ಅನಗತ್ಯ ಗೊಂದಲಗಳಿಗೆ ರಾಜ್ಯದ ಜನತೆ ಒಳಗಾಗಬಾರದು. ಸಮಾಜದಲ್ಲಿ ಶಾಂತಿ ಭಂಗಗೊಳಿಸಲು ಯತ್ನಿಸುವವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next