ಕೆಂಗೇರಿ: “ರಾಜರಾಜೇಶ್ವರಿ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಜನಪರ ಯೋಜನೆಗಳನ್ನು ರೂಪಿಸಲಾಗಿದೆ,” ಎಂದು ಎಂದು ಶಾಸಕ ಮುನಿರತ್ನ ಹೇಳಿದರು.
ಜ್ಞಾನಬಾರತಿ ವಾರ್ಡ್‌ನ ಪಾಪರೆಡ್ಡಿಪಾಳ್ಯ ಮತ್ತು ಮಲ್ಲತ್ತಹಳ್ಳಿಯಲ್ಲಿ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಿದರು.
“ನಾಗರಿಕರ ಆರೋಗ್ಯ ಸುಧಾರಣೆಗಾಗಿ ಪ್ರತಿ ವಾರ್ಡ್‌ಗಳಲ್ಲೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳ ಅಬಿವೃದ್ಧಿ, ಉದ್ಯಾನವನಗಳ ಉನ್ನತೀಕರಣ, ಸರಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಹಲವು ವರ್ಷಗಳಿಂದ ಅಭಿವೃದ್ಧಿಯಿಂದ ವಂಚಿತವಾಗಿದ್ದ ಬಡಾವಣೆಗಳನ್ನು ಆಧುನಿಕ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ,” ಎಂದರು.
“ಜ್ಞಾನಬಾರತಿ ವಾರ್ಡ್ ವಿಸ್ತೀರವಾದ ಭೂ ಪ್ರದೇಶ ಹೊಂದಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಮುಖ್ಯರಸ್ತೆಗಳನ್ನೂ ಡಾಂಬರಿಕರಣಗೊಳಿಸಲಾಗುವುದು. ಅಡ್ಡರಸ್ತೆ ಮತ್ತು ಕಿರು ರಸ್ತೆಗಳಿಗೆ ಕಾಂಕ್ರಿಟ್ ಹಾಕಲಾಗುವುದು. ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಆದ್ಯತೆ ಮೇರೆಗೆ ಕ್ಷೇತ್ರಾದಾದ್ಯಂತ ಕೊಳವೆ ಬಾವಿಗಳನ್ನು ಕೊರೆಸಿ ಸಮರ್ಪಕ ನೀರು ಸರಬರಾಜು ಮಾಡಲಾಗುತ್ತಿದೆ,” ಎಂದು ತಿಳಿಸಿದರು.
ಪಾಲಿಕೆ ಸದಸ್ಯೆ ತೇಜಸ್ವಿನಿ ಸೀತಾರಾಮಯ್ಯ, ಕೊಟ್ಟಿಗೆಪಾಳ್ಯ ಸದಸ್ಯ ಮೋಹನ್ ಕುಮಾರ್, ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಮುಖಂಡರಾದ ರವಿಗೌಡ, ಯೋಗೇಶ್, ರಾಜೇಶ್ ಸೇರಿದಂತೆ ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.