Advertisement
ಆ.7ರಿಂದ ಮರಳು ತೆಗೆಯುವ ಬಗ್ಗೆ ಪರವಾನಿಗೆ ನೀಡುವ ಅವಕಾಶವಿದ್ದರೂ ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಂತ ಹಂತವಾಗಿ ಮರಳುಗಾರಿಕೆ ನಡೆಸುವುದಾಗಿ ಹೇಳಿ ಜನರ ಹಾದಿ ತಪ್ಪಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಮರಳುಗಾರಿಕೆಗೆ ಹೊಸ ಅರ್ಜಿ ಸ್ವೀಕರಿಸುತ್ತಿದ್ದು, ಕಳೆದ 25 ವರ್ಷಗಳಿಂದ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದವರಿಗೆ ಅನ್ಯಾಯವಾಗಿದೆ ಎಂದು ಬಿಜೆಪಿ ಹೇಳಿದೆ.
ಜಿಲ್ಲೆಯಲ್ಲಿ 170 ಜನ ಸಾಂಪ್ರದಾಯಿಕ ಮರಳುಗಾರಿಕೆ ಮಾಡುತ್ತಿದ್ದವರಲ್ಲಿ ಸುಮಾರು 45 ಮಂದಿ ಮೇಲೆ ಜಿಲ್ಲಾಡಳಿತ ಹೈಕೋರ್ಟ್‌ನಲ್ಲಿ ಕೇವಿಯಟ್ ಹಾಕಿರುವುದು ಸಂಶಯ ಮೂಡಿಸಿದೆ. ಈ ಕೇವಿಯೆಟ್ ಅರ್ಜಿಯ ಹಿಂದೆ ಕಾಂಗ್ರೆಸ್ಸಿಗರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಕೈವಾಡವಿದ್ದು, 45 ಜನರನ್ನು ಹೊರಗಿಡುವ ಪ್ರಯತ್ನ ಇದಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಬಿಜೆಪಿ ಸಲ್ಲಿಸಿದ ಮನವಿಯಲ್ಲಿ ತಿಳಿಸಿದೆ. ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಶಾಸಕ ವಿ. ಸುನಿಲ್ ಕುಮಾರ್, ಮಾಜಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯಶ್‌ಪಾಲ್ ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಕೋಶಾಧಿಕಾರಿ ಬಿ. ರವಿ ಅಮೀನ್, ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ನಗರಾಧ್ಯಕ್ಷ ಪ್ರಭಾಕರ ಪೂಜಾರಿ, ಪ್ರ. ಕಾರ್ಯದರ್ಶಿಗಳಾದ ಜಗದೀಶ ಆಚಾರ್ಯ ಕಪ್ಪೆಟ್ಟು, ಉಪೇಂದ್ರ ನಾಯಕ್, ಟಿ.ಜಿ. ಹೆಗ್ಡೆ ಉಪಸ್ಥಿತರಿದ್ದರು.