Advertisement
ಕಂಪನಿ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕಿಂಗ್μಶರ್ ಸಂಸ್ಥೆಯ ಸ್ಥಿರಾಸ್ತಿ, ಚರಾಸ್ತಿಗಳ ಬಗ್ಗೆ ಮಾಹಿತಿ ನೀಡಿ ಸಹಕಾರ ನೀಡುವಂತೆ ಕಂಪನಿಯ ಮಾಜಿ ನಿರ್ದೇಶಕರಾದ ಎ.ಕೆ ರವೀಂದ್ರನಾಥ್ ನಿಡುಗುಂದಿ, ಸುಭಾಶ್ ಗುಪ್ತಾ, ಮನಮೋಹನ್ ಸಿಂಗ್ ಕಪೂರ್ ಹಾಗೂ ವಿಜಯ್ ಮಲ್ಯಾಗೆ ನಿರ್ದೇಶಿಸುವಂತೆ ಕೋರಿ ಕಂಪನಿಯ ಅಧಿಕಾರಿಗಳು ಹೈಕೋರ್ಟ್‌ಗೆ ಅರ್ಜಿಸಲ್ಲಿಸಿದ್ದರು. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾ. ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ, ಈ ಹಿಂದೆ ನೀಡಿದ್ದ ನೋಟಿಸ್‌ಗೆ ಉತ್ತರ ನೀಡದ ಹಿನ್ನೆಲೆಯಲ್ಲಿ ವಿಜಯ್ ಮಲ್ಯಗೆ ಜಾಮೀನು ಸಹಿತ ವಾರೆಂಟ್ ಜಾರಿಗೊಳಿಸಿದೆ. ಅಲ್ಲದೆ ಉಳಿದ ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.