ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 23 ಪ್ರಕರಣಗಳ ಮೋಸ್ಟ್ ವಾಂಟೆಡ್ ವಾರಂಟ್ ಆರೋಪಿ, ಕೃಷ್ಣಾಪುರ ಕಾಟಿಪಳ್ಳದ ಝೀನತ್ ಮಂಜಿಲ್ ನಿವಾಸಿ ಅಜರುದ್ದೀನ್ (29) ಯಾನೆ ಅಜರ್ ಯಾನೆ ನಾಥು ಎಂಬಾತನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈತನ ವಿರುದ್ಧ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟು ಇದೆ.
ಮಂಗಳೂರು ಪೊಲೀಸ್ ಆಯುಕ್ತರ ಆದೇಶದಂತೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್ ಕುಮಾರ್ ನಿರ್ದೇಶನದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಉಪನಿರೀಕ್ಷಕ ಮಲ್ಲಿಕಾರ್ಜುನ್, ಸಿಬಂದಿ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಆರೋಪಿಯನ್ನು ಬಂಧಿಸಿದೆ.