ಬೆಂಗಳೂರು: ನ್ಯೂಜಿಲ್ಯಾಂಡ್ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡಕ್ಕೆ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ರವಿವಾರ(ಅ 20) ಸೇರ್ಪಡೆಯಾಗಿದ್ದಾರೆ.
ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಎಂಟು ವಿಕೆಟ್‌ಗಳಿಂದ ಹೀನಾಯವಾಗಿ ಸೋತ ಕೂಡಲೇ ಆಯ್ಕೆಗಾರರು ವಾಷಿಂಗ್ಟನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.
ವಾಷಿಂಗ್ಟನ್ ಸುಂದರ್ ಅವರು ಎರಡನೇ ಟೆಸ್ಟ್‌ಗೆ ಮುಂಚಿತವಾಗಿ ಪುಣೆಯಲ್ಲಿ ತಂಡದೊಂದಿಗೆ ಸೇರಿಕೊಳ್ಳುತ್ತಾರೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.
ರಣಜಿ ಟ್ರೋಫಿ ಪಂದ್ಯದಲ್ಲಿ ದೆಹಲಿ ವಿರುದ್ಧ ನಡೆದ ಪಂದ್ಯದಲ್ಲಿ ತಮಿಳುನಾಡು ಪರ 152 ರನ್ ಗಳಿಸಿದ ನಂತರ 25 ರ ಹರೆಯದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.ಜನವರಿ 2021 ರಲ್ಲಿ ಗಾಬಾದಲ್ಲಿ ಆಸ್ಟ್ರೇಲಿಯ ವಿರುದ್ಧದ ಭಾರತದ ಐತಿಹಾಸಿಕ ಗೆಲುವಿನಲ್ಲಿ ವಾಷಿಂಗ್ಟನ್ ನಿರ್ಣಾಯಕ ಪಾತ್ರವನ್ನು ವಹಿಸಿದ್ದರು. ಆ ಪಂದ್ಯವು ಅವರ ಟೆಸ್ಟ್ ಚೊಚ್ಚಲ ಪಂದ್ಯವಾಗಿತ್ತು. ನಾಲ್ಕು ಟೆಸ್ಟ್, 22 ಏಕದಿನ ಮತ್ತು 52 ಟಿ 20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ ಅನುಭವ ವಾಷಿಂಗ್ಟನ್ ಸುಂದರ್ ಹೊಂದಿದ್ದಾರೆ.
ಎರಡನೇ ಟೆಸ್ಟ್ ಪಂದ್ಯ ಅಕ್ಟೋಬರ್ 24 ರಿಂದ ಪುಣೆಯಲ್ಲಿ ಆರಂಭವಾಗಲಿದೆ.
ಎರಡನೇ ಮತ್ತು ಮೂರನೇ ಟೆಸ್ಟ್ ಭಾರತ ತಂಡ:
ರೋಹಿತ್ ಶರ್ಮ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್.