Advertisement

ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆಲ್ಲಬೇಕಾದರೆ ಈ ಸೂತ್ರ ಪಾಲಿಸಿ: ವಾಸಿಂ ಜಾಫರ್ ಸಲಹೆ

02:32 PM Dec 24, 2021 | Team Udayavani |

ಮುಂಬೈ: ವಿದೇಶಗಳಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಟೀಂ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿಗೆ ಸಿದ್ದತೆ ನಡೆಸುತ್ತಿದೆ. ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲ್ಯಾಂಡ್ ಗಳಲ್ಲಿ ಉತ್ತಮ ಪ್ರದರ್ಶನ ತೋರಿರುವ ವಿರಾಟ್ ಕೊಹ್ಲಿ ಬಳಗ ಇದೇ ಮೊದಲ ಬಾರಿಗೆ ಹರಿಣಗಳ ನಾಡಿನಲ್ಲಿ ಟೆಸ್ಟ್ ಸರಣಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ.

Advertisement

2018ರ ಸರಣಿಯಲ್ಲಿ ಭಾರತ ತಂಡ ಉತ್ತಮ ಪ್ರದರ್ಶನದ ಹೊರತಾಗಿಯೂ ಸರಣಿ ಗೆಲ್ಲಲು ವಿಫಲವಾಗಿತ್ತು. ಈ ಬಾರಿ ಟೆಸ್ಟ್ ಸರಣಿಯನ್ನು ಗೆದ್ದೇ ಗೆಲ್ಲಬೇಕು ಎಂದು ಪಣತೊಟ್ಟಿರುವ ಕೊಹ್ಲಿ ಬಳಗ, ಸದ್ಯ ಸೆಂಚೂರಿಯನ್ ನಲ್ಲಿ ಅಭ್ಯಾಸ ನಡೆಸುತ್ತಿದೆ.

ಇದನ್ನೂ ಓದಿ:ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಬೇಕಿತ್ತು.: ನಾಯಕತ್ವ ಬದಲಾವಣೆ ಕುರಿತು ಶಾಸ್ತ್ರಿ ಮಾತು

ಟೀಂ ಇಂಡಿಯಾ ಮಾಜಿ ಆಟಗಾರ ವಾಸಿಂ ಜಾಫರ್ ಅವರು ವಿರಾಟ್ ಕೊಹ್ಲಿ ಬಳಗಕ್ಕೆ ಸಲಹೆ ನೀಡಿದ್ದಾರೆ. “2018 ರಲ್ಲಿ ಭಾರತವು ದಕ್ಷಿಣ ಆಫ್ರಿಕಾದಲ್ಲಿ ಆರು ಇನ್ನಿಂಗ್ಸ್‌ಗಳಲ್ಲಿ ಒಮ್ಮೆ ಮಾತ್ರ 250+ ರನ್ ಗಳಿಸಿದೆ. ಅದಕ್ಕಾಗಿಯೇ ನಾವು ಎಲ್ಲಾ ಮೂರು ಟೆಸ್ಟ್‌ಗಳಲ್ಲಿ 20 ವಿಕೆಟ್‌ಗಳನ್ನು ಪಡೆದರೂ ಸರಣಿಯನ್ನು ಕಳೆದುಕೊಂಡಿದ್ದೇವೆ. ದ.ಆಫ್ರಿಕಾದಲ್ಲಿ ಹೆಚ್ಚುವರಿ ಬ್ಯಾಟರ್ ಅತ್ಯಗತ್ಯವಾಗಿರುತ್ತದೆ. ನಾನು ಬುಮ್ರಾ, ಶಮಿ, ಸಿರಾಜ್ ಮತ್ತು ಅಶ್ವಿನ್ 4 ಬೌಲರ್‌ಗಳೊಂದಿಗೆ 7+4 ಕಾಂಬಿನೇಶನ್ ನಲ್ಲಿ ಆಡಬೇಕು” ಎಂದು ವಾಸಿಂ ಜಾಫರ್ ‘ಕೂ’ ಮಾಡಿದ್ದಾರೆ.

Koo App

ಭಾರತ ತಂಡದಲ್ಲಿ ಅನುಭವಿ ಅಜಿಂಕ್ಯ ರಹಾನೆ ಮತ್ತು ಯುವ ಆಟಗಾರ ಶ್ರೇಯಸ್ ಅಯ್ಯರ್ ನಡುವೆ ಒಂದು ಸ್ಥಾನಕ್ಕಾಗಿ ಪೈಪೋಟಿಯಿದೆ. ಕಳಪೆ ಪ್ರದರ್ಶನದ ಕಾರಣದಿಂದ ರಹಾನೆ ಈಗಾಗಲೇ ಉಪನಾಯಕ ಸ್ಥಾನ ಕಳೆದುಕೊಂಡಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧ ಪದಾರ್ಪಣೆ ಪಂದ್ಯದಲ್ಲೇ ಉತ್ತಮ ಪ್ರದರ್ಶನ ತೋರಿದ ಶ್ರೇಯಸ್ ಅಯ್ಯರ್ ಕೂಡಾ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ನಿರೀಕ್ಷಯಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next