ಬುಧವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿವಿಧ ಟಾಸ್ಕ್ಪೋರ್ಸ್ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Advertisement
ಜಿಲ್ಲೆಯ ಎಲ್ಲ ಪಟ್ಟಣ ಪ್ರದೇಶಗಳಲ್ಲಿ ಇದಕ್ಕಾಗಿ ಗುರುತಿಸಲಾಗಿರುವ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಸಮಸ್ಯೆಗಳು ಎದುರಾಗದಂತೆ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು. ಜಿಲ್ಲೆಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ, ಸೋಮೇಶ್ವರ, ವಿಟ್ಲ, ಕೋಟೆಕಾರು ಪಟ್ಟಣ ಪಂಚಾಯತ್‌ಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಜಮೀನು ಕಾದಿರಿಸಲು ಅವರು ಸೂಚಿಸಿದರು. ಪಚ್ಚನಾಡಿ ಘಟಕದ ತ್ಯಾಜ್ಯ ವಿಲೇವಾರಿಯನ್ನು ಜೈವಿಕ ಮಾದರಿಯಲ್ಲಿ ನಿರ್ವಹಿಸಲು ಈಗಾಗಲೇ ಸಿದ್ಧತೆ ಮಾಡಲಾಗಿದೆ ಎಂದರು.
Related Articles
ನಗರ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಬಫರ್ ಝೋನ್ ಗುರುತಿಸಲು ನಗರ ಸ್ಥಳಿಯ ಸಂಸ್ಥೆ ಹಾಗೂ ನಗರ ಯೋಜನಾ ಪ್ರಾಧಿಕಾರಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯು ಸೂಚಿಸಬೇಕು. ಇಂತಹ ಪ್ರದೇಶಗಳಲ್ಲಿ ಯಾವುದೇ ಲೇಔಟ್ ಅಥವಾ ಮನೆ ನಿರ್ಮಾಣಕ್ಕೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ನಗರ ಪ್ರದೇಶಗಳಲ್ಲಿ ಯುಜಿಡಿ ಒಳಚರಂಡಿ ವ್ಯವಸ್ಥೆ ಇಲ್ಲದ ಪ್ರದೇಶಗಳನ್ನು ಗುರುತಿಸಿ, ಅಲ್ಲಿನ ತ್ಯಾಜ್ಯ ನೀರಿನ ಹರಿವಿನ ಬಗ್ಗೆ ಗಮನಹರಿಸಬೇಕು ಎಂದು ಡಿಸಿ ಹೇಳಿದರು.
Advertisement