Advertisement
ಬಿಬಿಎಂಪಿ ವತಿಯಿಂದ ನಗರದ 700 ಜನರಿಗೆ ಒಬ್ಬರಂತೆ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿದ್ದು, ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಆದರೆ, ಕಳೆದ 3 ತಿಂಗಳಿಂದ ಕಾರ್ಮಿಕರ ಬ್ಯಾಂಕ್ ಖಾತೆಗೆ ವೇತನಜಮಾ ಆಗಿಲ್ಲ. ಇದರಿಂದಾಗಿ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ. ಹಲವು ವಾರ್ಡ್‌ಗಳಲ್ಲಿ ಪೌರಕಾರ್ಮಿಕರು ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಿಸುವುದನ್ನೂ ನಿಲ್ಲಿಸಿದ್ದಾರೆ. ಇದರಿಂದಾಗಿ ನಾಗರಿಕರು ತ್ಯಾಜ್ಯವನ್ನು ರಸ್ತೆ ಬದಿ ಹಾಗೂ ನಿವೇಶನಗಳಲ್ಲಿ ಎಸೆಯುತ್ತಿದ್ದಾರೆ. ಈ ಕಸದೊಂದಿಗೆ ಮಳೆ ನೀರು ಸೇರಿ ಕೊಳೆತು ದುರ್ವಾಸನೆ ಬೀರುತ್ತಿದೆ.
ಕೇಂದ್ರ ಕಚೇರಿಗೆ ಕೂಗಳತೆ ದೂರದ ಹಲವಾರು ಭಾಗಗಳಲ್ಲಿ ಕಪ್ಪು ಸ್ಥಳಗಳ (ಬ್ಲಾಕ್‌ಸ್ಪಾಟ್) ಸಂಖ್ಯೆ
ಹೆಚ್ಚಾಗುತ್ತಿದ್ದು, ನಗರದಲ್ಲಿ ಮತ್ತೆ ತ್ಯಾಜ್ಯ ಸಮಸ್ಯೆ ಸೃಷ್ಟಿಯಾಗುವ ಆತಂಕ ಎದುರಾಗಿದೆ.