Advertisement
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದ ನದಿಗಳಲ್ಲಿ ಪ್ರವಾಹ ಉಂಟಾದಾಗ ಭಾರೀ ಅಲೆಗಳಿಂದ ಉಪ್ಪು ನೀರು ಹಿಮ್ಮುಖವಾಗಿ ನುಗ್ಗುವುದನ್ನು ಪ್ಲಾಪ್ ಗೇಟ್ ಮೂಲಕ ತಡೆಗಟ್ಟುವ ಖಾರ್‌ಲ್ಯಾಂಡ್ ಯೋಜನೆಯನ್ನು 300 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Related Articles
Advertisement
ಉತ್ತರ ಕರ್ನಾಟಕದ ಆರು ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಒದಗಿ ಸುವ ಗುರಿ ಹೊಂದಿರುವ ಕೃಷ್ಣಾ ಮೇಲ್ಡಂಡೆ ಯೋಜನೆ 3ನೇ ಹಂತದ ಯೋಜನೆ ಅನುಷ್ಠಾನ ಗೊಳಿಸಲು ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಕೇಂದ್ರದ ನೆರವು ಪಡೆಯಲಾಗುವುದು. ಈ ಯೋಜನೆಗೆ 5,600 ಕೋಟಿ ರೂ. ಮೀಸಲಿಡಲಾಗುವುದು ಎಂದು ತಿಳಿಸಿದ್ದಾರೆ.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಪ್ರಥಮ ಹಂತದ ಏತ ನೀರಾವರಿ ಕಾಮಗಾರಿಗಳು ಮುಗಿಯುವ ಹಂತದಲ್ಲಿದ್ದು, ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಅಡ್ಡಿಯಾಗಿರುವ ಭೂ ಸ್ವಾಧೀನ ಸಮಸ್ಯೆಗಳನ್ನು ನಿವಾರಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯಕ್ಕೆ ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯದೊಂದಿಗೆ ಸಮಾಲೋಚಿಸಿ ಯೋಜನೆ ಅನುಷ್ಠಾನ ಮಾಡುವ ಘೋಷಣೆ ಮಾಡಿದ್ದಾರೆ. ವಿಶ್ವಬ್ಯಾಂಕ್ ನೆರವಿನೊಂದಿಗೆ ಡ್ರಿಪ್ ಯೋಜನೆ ಅಡಿಯಲ್ಲಿ 1,500 ಕೋಟಿ ಮೊತ್ತದಲ್ಲಿ 58 ಅಣೆಕಟ್ಟುಗಳ ಪುನಶ್ಚೇತನ ಮತ್ತು ಅಭಿವೃದ್ಧಿ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಅಲ್ಲದೇ ಜಲ ಸಂಪನ್ಮೂಲ ಇಲಾಖೆಯಡಿ ಯಲ್ಲಿ ಅನುಷ್ಠಾನಗೊಂಡಿರುವ ಮತ್ತು ಅನು ಷ್ಠಾನಗೊಳ್ಳುತ್ತಿರುವ ಎಲ್ಲ ಏತ ನೀರಾವರಿ ಯೋಜನೆಗಳ ವ್ಯವಸ್ಥಿತ ಕಾರ್ಯಾಚರಣೆಗಳ ಮತ್ತು ನಿರ್ವಹಣೆಗಾಗಿ ಸೂಕ್ತ ಮಾರ್ಗಸೂಚಿ ಗಳೊಂದಿಗೆ ಕಾರ್ಯ ನೀತಿ ರೂಪಿಸುವುದಾಗಿ ತಿಳಿಸಿದ್ದಾರೆ.
ಜಲ ಸಂಪನ್ಮೂಲ ಇಲಾಖೆಯಡಿ 5 ಲಕ್ಷ ಹೆಕ್ಟೇರ್‌ಗೂ ಅಧಿಕ ಅಚ್ಚುಕಟ್ಟು ಪ್ರದೇಶಗಳಿಗೆ ಸೂಕ್ಷ್ಮ ಮತ್ತು ತುಂತುರು ನೀರಾವರಿ ಯೋಜನೆ ಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸು ವುದಾಗಿ ತಿಳಿಸಿದ್ದಾರೆ.
ಬೆಂಗಳೂರು ನಗರದ ವೃಷಭಾವತಿ ಕಣಿವೆಯಿಂದ ದ್ವಿತೀಯ ಹಂತಕ್ಕೆ ಸಂಸ್ಕರಿಸಿದ 308 ಎಂ.ಎಲ್.ಡಿ ನೀರನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 234 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು 500 ಕೋಟಿ ಮೀಸಲಿಟ್ಟಿದ್ದಾರೆ.
“ಆತ್ಮನಿರ್ಭರ’ಕ್ಕೆ ಬಲಕೃಷಿ ನವೋದ್ಯಮಗಳ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ಕಲ್ಪಿಸಲು, ಸ್ಥಳೀಯ ಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡಲು ವಿಜಯಪುರದ ಇಟ್ಟಂಗಿಹಾಳದಲ್ಲಿ ಆತ್ಮನಿರ್ಭರ ಭಾರತ ಅಭಿಯಾನದಡಿ ಆಹಾರ ಪಾರ್ಕ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಅದೇ ರೀತಿ, ಆತ್ಮನಿರ್ಭರದಡಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧ ಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಡಿ ಶೇ. 35ರಷ್ಟು ಸಹಾಯಧನ ನೀಡಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರ ಕೂಡ ಶೇ. 15ರಷ್ಟು ಸಹಾಯಧನ ನೀಡುವ ಮೂಲಕ ಇದರ ಪ್ರಮಾಣವನ್ನು ಒಟ್ಟಾರೆ ಶೇ. 50ಕ್ಕೆ ವಿಸ್ತರಿಸಲಾಗುತ್ತಿದೆ. ಇದಕ್ಕಾಗಿ ಬಜೆಟ್‌ನಲ್ಲಿ 50 ಕೋಟಿ ರೂ. ನೀಡಲಾಗಿದೆ. ಈ ಸಹಾಯಧನವನ್ನು ಶೀತಲಗೃಹ ನಿರ್ಮಾಣ, ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಬಹುದಾಗಿದೆ.