ಹಾಸನ: ಹೊರ ರಾಜ್ಯಗಳಿಂದ ಬರುತ್ತಿರುವವರಿಂದ ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ಹೊರರಾಜ್ಯಗಳಿಂದ ಬಂದವರಿಗೆ ಕಟ್ಟುನಿಟ್ಟಾಗಿ ಕ್ವಾರಂಟೈನ್ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್‌ಸಿಂಗ್ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಹೊರ ರಾಜ್ಯಗಳಿಂದ ಬಂದವರಲ್ಲಿ ಕೋವಿಡ್ 19 ರೋಗ ಲಕ್ಷಣಗಳಿಲ್ಲದಿದ್ದರೂ ಸಹ ಕ್ವಾರಂಟೈನ್ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ಕೋವಿಡ್ 19 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹೋಗಿರುವವರ ಕ್ವಾರಂಟೈನ್ ಮಾಡುವುದರ ಜೊತೆಗೆ ಜಿಯೋ ಫೆನ್ಸಿಂಗ್ ಮೂಲಕ ಅವರು ಹೊರಗೆ ಬರದಂತೆ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು.
ಹೋಂ ಕ್ವಾರಂಟೈನ್ ಅವಧಿ ಮುಗಿಯುವವರೆಗೂ ಅವರು ಹೊರ ಬರದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು. ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೋವಿಡ್ 19 ಪ್ರಕರಣಗಳ ಪೈಕಿ ಹೊರ ರಾಜ್ಯ ಗಳಿಂದ ಬಂದು ಕ್ವಾರಂಟೈನ್ ಕೇಂದ್ರಗಳಲ್ಲಿ ದ್ದವರೇ ಹೆಚ್ಚು. ಅವರ್ಯಾರೂ ಕೂಡ ಸಮು ದಾಯದ ಸಂಪರ್ಕಕ್ಕೆ ಹೋಗಿಲ್ಲ.
ಹಾಗಾಗಿ ಜಿಲ್ಲೆಯೊಳಗಿನ ಶೀತ, ಜ್ವರ, ಉಸಿರಾಟದ ತೊಂದರೆ ಇರುವ ಯಾವ ವ್ಯಕ್ತಿಗೂ ಸಹ ಸೋಂಕು ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಎಸ್ಪಿ ಆರ್.ಶ್ರೀನಿವಾಸ್‌ಗೌಡ, ಜಿಪಂ ಸಿಇಒ ಬಿ.ಎ ಪರಮೇಶ್, ಉಪ ವಿಭಾಗಾಧಿಕಾರಿ ಡಾ. ನವೀನ್ ಭಟ್, ಆಹಾರ ಮತ್ತು ನಾಗರಿಕ ಸರಬರಾಜು ಉಪನಿರ್ದೇಶಕಿ ಸವಿತಾ, ಡಿಎಚ್‌ಒ ಡಾ.ಸತೀಶ್ ಕುಮಾರ್, ಜಿಲ್ಲಾ ಶಸOಉ ಚಿಕಿತ್ಸಕ ಡಾ. ಕೃಷ್ಣಮೂರ್ತಿ, ಹಿಮ್ಸ್ ನಿರ್ದೇಶಕ ಡಾ. ರವಿಕುಮಾರ್ ಹಾಜರಿದ್ದರು.
ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್..: ಜಿಲ್ಲೆಯಲ್ಲಿ ಬಹುತೇಕ ಎಲ್ಲ ಖಾಸಗಿ ಆಸ್ಪತ್ರೆಗಳು ತೆರೆದಿದ್ದು ಕೆಲವು ಮಾತ್ರ ಮುಚ್ಚಿವೆ. ಇನ್ನೂ ತೆರೆಯದಿರುವ ಆಸ್ಪತ್ರೆ ಗಳಿಗೆ ಈಗಾಗಲೇ ನೋಟಿಸ್ ಕಳುಹಿಸ ಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಹೇಳಿದರು. ಇನ್ನೂ ಮುಚ್ಚಿರುವ ಆಸ್ಪತ್ರೆಗಳಿಗೆ ಮೂರು ಬಾರಿ ನೋಟಿಸ್ ನೀಡಿ, ಆನಂತರವೂ ತೆರೆಯ ದಿದ್ದರೆ ಆಸ್ಪತ್ರೆಯ ಪರವಾನಗಿಯನ್ನು ರದ್ದು ಗೊಳಿಸಬೇಕು. ಶೀತ, ಜ್ವರ, ಉಸಿರಾಟದ ತೊಂದರೆ ಇರುವ ವ್ಯಕ್ತಿಗಳನ್ನು ಗುರುತಿ ಸಲು ಮೆಡಿಕಲ್ ಶಾಪ್‌ಗ್ಳಲ್ಲಿ ಔಷಧಿ ಗಳನ್ನು ಖರೀದಿಸುವವರ ವರದಿಯನ್ನು ಕಡ್ಡಾಯವಾಗಿ ನೀಡುವಂತೆ ಸೂಚನೆ ನೀಡಿ ಎಂದು ಸೂಚಿಸಿದರು.