Advertisement

Watch: 46 ವರ್ಷಗಳ ಬಳಿಕ 1000 ಮಿ.ಮೀಟರ್ ದಾಖಲೆ ಮಳೆ; ನವದೆಹಲಿ ವಿಮಾನ ನಿಲ್ದಾಣ ಜಲಾವೃತ

01:04 PM Sep 11, 2021 | Team Udayavani |

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ನವದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ನೀರು ತುಂಬಿಕೊಂಡಿರುವ ಘಟನೆ ಶನಿವಾರ (ಸೆಪ್ಟೆಂಬರ್ 11) ನಡೆದಿದೆ. ಹವಾಮಾನ ಇಲಾಖೆ ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ಘೋಷಿಸಿತ್ತು.

Advertisement

ಇದನ್ನೂ ಓದಿ:ಕಾರ್ಖಾನೆಯ ಜೊತೆ ಮುರಿದು ಬಿದ್ದ ಸಂಧಾನ ಮಾತುಕತೆ : ಓಟಿ ಸ್ಥಗಿತಗೊಳಿಸಲು ಕಾರ್ಮಿಕರ ನಿರ್ಧಾರ

ಶುಕ್ರವಾರ ನವದೆಹಲಿಯಲ್ಲಿ ದಾಖಲೆ ಪ್ರಮಾಣದ 1,000 ಮಿಲಿ ಮೀಟರ್ ಮಳೆಯಾಗಿತ್ತು. ಇದು ಕಳೆದ 46 ವರ್ಷಗಳ ಬಳಿಕ ಸುರಿದ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಎನ್ ಐ ನ್ಯೂಸ್ ಏಜೆನ್ಸಿ ಶೇರ್ ಮಾಡಿರುವ ವಿಡಿಯೋದಲ್ಲಿ, ದೆಹಲಿ ವಿಮಾನ ನಿಲ್ದಾಣದಲ್ಲಿರುವ ವಿಮಾನಗಳು ಭಾಗಶಃ ನೀರಿನಿಂದ ಆವೃತ್ತವಾಗಿದೆ. ಹವಾಮಾನ ವೈಪರೀತ್ಯದಿಂದ ವಿಮಾನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಭಾರೀ ಮಳೆಯ ಪರಿಣಾಮ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಇಂಡಿಗ, ಸ್ಪೈಸ್ ಜೆಟ್ ವಿಮಾನ ಸಂಸ್ಥೆ ಪ್ರಕಟಣೆಯಲ್ಲಿ ವಿವರಿಸಿದೆ.

Advertisement

ಆಕಸ್ಮಿಕವಾಗಿ ಸುರಿದ ಭಾರೀ ಮಳೆಯ ಪರಿಣಾಮ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜಲಾವೃತಗೊಂಡಿರುವುದಾಗಿ ತಿಳಿಸಿದೆ. ನಮ್ಮ ತಂಡ ಶೀಘ್ರವೇ ಕಾರ್ಯಪ್ರವೃತ್ತವಾಗಿದ್ದು, ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.

ದೆಹಲಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿತ್ತು. ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮ ದೆಹಲಿಯ ಹಲವು ಪ್ರದೇಶಗಳು ಜಲಾವೃತಗೊಂಡಿದೆ. 1975ರ ಬಳಿಕ ಇದೇ ಮೊದಲ ಬಾರಿ ರಾಷ್ಟ್ರರಾಜಧಾನಿಯಲ್ಲಿ 1,000 ಮಿಲಿ ಮೀಟರ್ ಮಳೆಯಾಗಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next