Advertisement

ಮುಂಬೈ ಸೀ ಲಿಂಕ್‌ನಲ್ಲಿ ಭೀಕರ ಅಪಘಾತ: 5 ಸಾವು

06:43 PM Oct 05, 2022 | Team Udayavani |

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನ ಬಾಂದ್ರಾ-ವರ್ಲಿ ಸಮುದ್ರ ಸೇತುವೆಯಲ್ಲಿ ವೇಗವಾಗಿ ಬಂದ ಕಾರ್‌ ಆ್ಯಂಬ್ಯುಲೆನ್ಸ್‌, ಇತರ ಮೂರು ಕಾರುಗಳಲ್ಲಿ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಐವರು ಅಸುನೀಗಿದ್ದಾರೆ.

Advertisement

ಈ ದುರಂತದಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಅಪಘಾತದ ಬಗ್ಗೆ ಪ್ರಧಾನಮಂತ್ರಿಗಳ ಕಚೇರಿ ಟ್ವೀಟ್‌ ಮಾಡಿ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿದೆ.


ಕಾರು ಮೊದಲಿಗೆ ಡಿವೈಡರ್‌ಗೆ ಡಿಕ್ಕಿ ಹೊಡೆದು ನಂತರ ಇತರ ವಾಹನಗಳಿಗೆ ಅಪ್ಪಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿ ಹೊಡೆಯುವ ವಿಡಿಯೋ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next