ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತಾದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಾನಪದ ಕಲಾವಿದರೊಂದಿಗೆ ಕೈ ಕೈ ಹಿಡಿದು ನೃತ್ಯ ಮಾಡಿದರು.
76ನೇ ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆಯ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರೊಂದಿಗೆ ಸಿಎಂ ಮಮತಾ ಹೆಜ್ಜೆ ಹಾಕಿದರು. ಸಿಎಂ ಮಮತಾ ಬ್ಯಾನರ್ಜಿ ನೃತ್ಯಕ್ಕೆ ಸಭಿಕರು ಎದ್ದು ನಿಂತು ಗೌರವ ಸೂಚಿಸಿದರು.
ಈ ಸಂದರ್ಭದಲ್ಲಿ, ಬ್ಯಾನರ್ಜಿ ಅವರು ತ್ರಿವರ್ಣ ಧ್ವಜವನ್ನು ಹಾರಿಸಿದರು, ರಾಜ್ಯ ಪೊಲೀಸರು ನೀಡಿದ ಗೌರವ ರಕ್ಷೆಯನ್ನು ಪರಿಶೀಲಿಸಿದರು.
ಇದನ್ನೂ ಓದಿ:ಸರ್ಕಾರಿ ಜಾಹೀರಾತಿನಲ್ಲಿ ನೆಹರೂ ಇದ್ದಾರೆ: ಕಾಂಗ್ರೆಸ್ ನಾಯಕರಿಗೆ ಸಿಎಂ ತಿರುಗೇಟು
ಸ್ವತಂತ್ರ ಭಾರತಕ್ಕ 75 ವರ್ಷ ತುಂಬಿದ ಈ ಸಂದರ್ಭದಲ್ಲಿ ಭಾರತ ಸ್ವಾತಂತ್ರ್ಯದ ನಿಜವಾದ ಸಾರದಿಂದ ಜಾಗೃತವಾಗಬೇಕು. ನಮ್ಮ ಹಿರಿಯರು ತೋರಿಸಿದ ದಾರಿಗೆ ನಾವು ನಿಷ್ಠರಾಗಿರಬೇಕು. ಮತ್ತು ಮುಂದಿನ ಪೀಳಿಗೆಯ ಆಕಾಂಕ್ಷೆಗಳನ್ನು ಪೂರ್ಣಗೊಳಿಸಬೇಕು ಎಂದು ಮಮತಾ ಬ್ಯಾನರ್ಜಿ ಹೇಳಿದರು.