Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ (ಐಸೋಲೇಷನ್) ಇರಿಸಿರುವ ಶಂಕಿತರಿಗೆ ದಿನಪತ್ರಿಕೆ, ಟಿವಿ, ವೈಫೈ ಸೇವೆ ಕಲ್ಪಿಸುವುದು ಹಾಗೂ ಗುಣಮಟ್ಟದ ಆಹಾರವನ್ನು ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು.
Related Articles
Advertisement
ವಿದೇಶದಿಂದ ಬರುವವರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದ್ದು, ಶಂಕಿತರು ಕಂಡುಬಂದಲ್ಲಿ ಜಿಲ್ಲಾಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕೆ. ಮೋಹನ್ ಅವರು ಮಾಹಿತಿ ನೀಡಿ ಕೊರೊನಾ ವೈರಸ್ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆಯಲ್ಲಿ 22 ಹಾಸಿಗೆಯ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ.
ತಾಲ್ಲೂಕು ಆಸ್ಪತ್ರೆಯಲ್ಲಿ 2 ಹಾಸಿಗೆಯ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು. ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಕಾರ್ಯಪ್ಪ ಅವರು ಕೋವಿಡ್ ಶಂಕಿತರಿಗೆ ಎಲ್ಲÉ ರೀತಿಯ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗಿದೆ ಎಂದರು. ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ತಮ್ಮಯ್ಯ ಅವರು ರಾಜ್ಯದಲ್ಲಿ ಹಕ್ಕಿಜ್ವರ ಕಂಡು ಬಂದಿರುವುದರಿಂದ ಕೊಡಗು ಜಿಲ್ಲೆಯಲ್ಲಿಯೂ ಹೆಚ್ಚಿನ ಗಮನ ಹರಿಸಲಾಗಿದೆ ಎಂದರು. ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಸ್ನೇಹಾ, ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀಕ್ಷಕ ಲೋಕೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ಪೌರಾಯುಕ್ತ ರಮೇಶ್, ಉಪಸ್ಥಿತರಿದ್ದರು.