ಬೆಂಗಳೂರು: ಮಾಹಿತಿ ತಂತ್ರಜ್ಞಾನ ಸಂಸ್ಥೆ ಇನ್ಫೋಸಿಸ್ ಸ್ಥಾಪನೆಯಾಗಿ ನಾಲ್ಕು ದಶಕಗಳು ಸಂದಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿರುವ ಕಂಪನಿಯ ಪ್ರಧಾನ ಕಚೇರಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಇದೇ ವೇಳೆ ಬುಧವಾರ ರಾತ್ರಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಅವರೊಂದಿಗೆ ಹಾಡೊಂದಕ್ಕೆ ಹೆಜ್ಜೆ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಣಿರತ್ನಂ ನಿರ್ದೇಶನದ ಬಾಲಿವುಡ್ ಸಿನಿಮಾ “ಗುರು’ ಚಿತ್ರದ “ಬರ್ಸೊ ರೆ ಮೇಘಾ ಮೇಘಾ….’ ಹಾಡಿಗೆ ಸುಧಾ ಮೂರ್ತಿ ಅವರು ಗಾಯಕಿ ಶ್ರೇಯಾ ಘೋಷಾಲ್ ಮತ್ತು ಇತರೆ ಸ್ನೇಹಿತರೊಂದಿಗೆ ಖುಷಿಯಲ್ಲಿ ಕುಣಿಯುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ವಿಡಿಯೋ ಅನ್ನು ಚಂದ್ರ ಆರ್. ಶ್ರೀಕಾಂತ್ ಎಂಬುವವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.