ಮುಂಬೈ: ಒಂದು ವಾರದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ಧ ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಅವರು ಮಹಾರಾಷ್ಟ್ರದ ಥಾಣೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸದ್ಯ ಅವರ ಅರೋಗ್ಯ ಸುಧಾರಿಸುತ್ತಿದ್ದು ಇದರ ಬೆನ್ನಲ್ಲೇ ಆಸ್ಪತ್ರೆಯಲ್ಲಿ ನೃತ್ಯ ಮಾಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೌದು ವಿನೋದ್ ಕಾಂಬ್ಳಿ ಚಿಕಿತ್ಸೆ ಪಡೆಯುತ್ತಿರುವ ಆಕೃತಿ ಆಸ್ಪತ್ರೆಯ ವೈದ್ಯರು ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಸೋಮವಾರ ಹೇಳಿದರು. ಅದರಂತೆ ಆಸ್ಪತ್ರೆಯ ಸಿಬ್ಬಂದಿ ಜೊತೆ ಚಕ್ ದೇ ಇಂಡಿಯಾ ಹಾಡಿಗೆ ಕ್ರಿಕೆಟಿಗ ಕಾಂಬ್ಳಿ ನೃತ್ಯ ಮಾಡಿದ್ದಾರೆ ಇದರ ವಿಡಿಯೋ ಕೂಡ ಸಾಮಾಜಿಕ ಸಾಮಾಜಿತ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಅಷ್ಟು ಮಾತ್ರವಲ್ಲದೆ ಕಾಂಬ್ಳಿ ಆಸ್ಪತ್ರೆಯಲ್ಲಿ ಖುಷಿ ಖುಷಿಯಲ್ಲಿ ನೃತ್ಯ ಮಾಡುತ್ತಿರುವ ವಿಡಿಯೋ ನೋಡಿ ಅವರ ಅಭಿಮಾನಿಗಳು ಕೂಡಾ ಸಂತಸ ವ್ಯಕ್ತಪಡಿಸಿದ್ದಾರೆ,
ವಾರದ ಹಿಂದೆ (ಡಿಸೆಂಬರ್ 21) ಮೂತ್ರದ ಸೋಂಕು ಮತ್ತು ಸ್ನಾಯು ಸೆಳೆತಕ್ಕೆ ಸಂಬಂಧಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಬ್ಳಿ ಅವರನ್ನು ಪರೀಕ್ಷೆ ನಡೆಸಿದ ವೈದ್ಯರಿಗೆ ಕಾಂಬ್ಳಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಗೊತ್ತಾಗಿದೆ, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಬ್ಳಿ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು ಇದರ ಬೆನ್ನಲ್ಲೇ ಆಸ್ಪತ್ರೆ ಸಿಬ್ಬಂದಿ ಜೊತೆ ನೃತ್ಯ ಮಾಡುವ ಮೂಲಕ ಅನಾರೋಗ್ಯವನ್ನು ಮೆಟ್ಟಿ ನಿಂತಿದ್ದಾರೆ.