Advertisement
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿಕೆ ಹಳ್ಳಿ) ಯಲ್ಲಿ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿಯ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿ ಮೇಕೆದಾಟು, ಮಹದಾಯಿ ಯೋಜನೆಗಳಿಗೆ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರ ಧ್ವನಿ ಎತ್ತುತ್ತಿಲ್ಲ. ಕರ್ನಾಟಕಕ್ಕೆ ಏಕೆ ಮಲತಾಯಿ ಧೋರಣೆ ಎಂದು ಕೇಂದ್ರ ಸರ್ಕಾರವನ್ನು ಇವರ‌್ಯಾರೂ ಪ್ರಶ್ನಿಸುತ್ತಿಲ್ಲ ಏಕೆ ಎಂದು ಕೇಳಿದರು.
ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ತೆರಿಗೆಯಲ್ಲಿ ನಮಗೆ ಅನ್ಯಾಯ ಆಗಿದೆ. ಕೇಂದ್ರ, ರಾಜ್ಯಗಳಿಗೆ ಬಿಡುಗಡೆ ಮಾಡಿರುವ ತೆರಿಗೆ ಪಾಲಿನಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶಕ್ಕೆ ಬಹುಪಾಲು ಹೋಗಿ ರಾಜ್ಯಕ್ಕೆ ಅನ್ಯಾಯ ಮಾಡಿ ಮಲತಾಯಿ ಧೋರಣೆ ತೋರಿದೆ. ಪ್ರತಿ ವರ್ಷ 4 ಲಕ್ಷ ಕೋಟಿಗೂ ಅಧಿಕ ತೆರಿಗೆ ಕೇಂದ್ರಕ್ಕೆ ಕೊಡುತ್ತಿದ್ದೀವಿ. ಆದರೆ ವಾಪಸ್ ನಮಗೆ ಬರುತ್ತಿರುವುದು ₹60 ಸಾವಿರ ಕೋಟಿ ಮಾತ್ರ. 100 ಪೈಸೆಗೆ 15 ಪೈಸೆ ಮಾತ್ರ ವಾಪಸ್ ಬರುತ್ತಿದೆ. ಇದು ಅನ್ಯಾಯ ಅಲ್ವಾ? ಏಕೆ ಬಿಜೆಪಿ ಸಂಸದರು ಪ್ರಶ್ನಿಸುತ್ತಿಲ್ಲ? ಎಂದು ಸಭೆಯಲ್ಲಿ ಪ್ರಶ್ನಿಸಿದರು. ಎಚ್‌ಡಿಕೆ ಸಿಎಂ ಆಗಿದ್ದಾಗ ಹಣ ಬಿಡುಗಡೆ ಮಾಡದೇ ನಿರಾಸಕ್ತಿ:
ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆ 2014ರಲ್ಲಿ ನಾನೇ ಶಂಕುಸ್ಥಾಪನೆ ಮಾಡಿದ್ದೆ, ಇಂದು ನನ್ನಿಂದಲೇ ಉದ್ಘಾಟನೆಯಾಗಿದೆ. ನಾನು ನುಡಿದಂತೆ ನಡೆದಿದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ವಹಿದಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು ಯೋಜನೆ ಲೋಕಾರ್ಪಣೆಗೊಳಿಸಿ 110 ಹಳ್ಳಿಗಳಿಗೆ ನೀರು ಒದಗಿಸಿದ್ದೇವ ಎಂದು ಹೇಳಿದರು.
Related Articles
Advertisement