Advertisement
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಬರ ಪರಿಸ್ಥಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆದು ನೀರು ಪೂರೈಸಬೇಕು ಹಾಗೂ ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಆಯಾ ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ತಾಪಂ ಇಒಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸದಾ ನಿಗಾವಹಿಸಬೇಕು ಎಂದು ಸೂಚಿಸಿದರು.
Related Articles
Advertisement
205 ಸಮಸ್ಯಾತ್ಮಕ ಹಳ್ಳಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯ ನಿರ್ವಾಹಕ ಎಂಜಿನಿಯರ್ ಮಾತನಾಡಿ, ಜಿಲ್ಲೆಯಲ್ಲಿ 205 ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಲಾಗಿದೆ. 57 ಗ್ರಾಮಗಳಲ್ಲಿ 116 ಖಾಸಗಿ ಕೊಳವೆ ಬಾವಿಗಳನ್ನು ಒಪ್ಪಂದದ ಆಧಾರದ ಮೇಲೆ ಪಡೆಯಲಾಗಿದೆ. ಅಗತ್ಯಕ್ಕೆ ತಕ್ಕಂತೆ ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ವಿವರಿಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮಾತನಾಡಿ, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸದ್ಯ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿಲ್ಲ ಹಾಗೂ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದಿಲ್ಲ. ಮುಂಬರುವ ದಿನಗಳಲ್ಲಿ ಅಂತಹ ಸಮಸ್ಯೆಗಳು ಉದ್ಭವಿಸಿದಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ನಗರ, ಪಟ್ಟಣ ಪ್ರದೇಶಗಳಲ್ಲಿ 2018 19ನೇ ಸಾಲಿನಲ್ಲಿ ಎಸ್‌ಎಫ್‌ಸಿ ಅನುದಾನದಲ್ಲಿ 180 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, 54 ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ 3.26 ಲಕ್ಷ ಮೆಟ್ರಿಕ್ ಟನ್ ಮೇವು 25 ವಾರಗಳಿಗೆ ಸಾಕಾಗುಷ್ಟು ದಾಸ್ತಾನು ಇದೆ. ಸಾಕಷ್ಟು ಪ್ರಮಾಣದಲ್ಲಿ ಮೇವು ಲಭ್ಯವಿರುವುದರಿಂದ ಮೇವು ಬ್ಯಾಂಕ್ ಹಾಗೂ ಗೋಶಾಲೆಗಳನ್ನು ಆರಂಭಿಸುವುದು ಸದ್ಯ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಕಂಡುಬಂದರೆ ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
732 ಶುದ್ಧ ನೀರಿನ ಘಟಕಬ್ಯಾಡಗಿ ತಾಲೂಕಿನಲ್ಲಿ 85, ಹಾನಗಲ್ 126, ಹಾವೇರಿ 108, ಹಿರೇಕೆರೂರು 125, ರಾಣೇಬೆನ್ನೂರು 143, ಸವಣೂರು 63 ಹಾಗೂ ಶಿಗ್ಗಾವಿ ತಾಲೂಕಿನಲ್ಲಿ 82 ಗ್ರಾಮಗಳು ಸೇರಿ 732 ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಹಾನಗಲ್ಲ ತಾಲೂಕಿನ ಎರಡು, ಹಾವೇರಿ, ರಾಣಿಬೆನ್ನೂರು ಹಾಗೂ ಸವಣೂರ ತಾಲೂಕಿನ ತಲಾ ಒಂದು ಶುದ್ಧ ನೀರಿನ ಘಟಕ ಸೇರಿ ಐದು ಘಟಕಗಳು ದುರಸ್ತಿಯಲ್ಲಿವೆ ಎಂದು ಮಾಹಿತಿ ನೀಡಿದರು.