Advertisement
ತಾಲೂಕಿನ ಸೋಮನಹಳ್ಳಿ ಜಿಪಂ ವ್ಯಾಪ್ತಿಯ ಕೂಳಗೆರೆ ಗ್ರಾಮದಲ್ಲಿ ನಡೆಯುತ್ತಿರುವ 18 ಕೆರೆಗೆ ನೀರು ತುಂಬಿಸುವ ಕಾಮಗಾರಿ ಯೋಜನೆಯನ್ನು ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, 77 ಕೋಟಿ ರೂ.ನಲ್ಲಿ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು 18 ಕೆರೆಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡುವುದಾಗಿ ವಿವರಿಸಿದರು. ಅಲ್ಲದೆ, ಈ ಭಾಗದ ಕೆರೆ, ಕಟ್ಟೆಗಳು ತುಂಬುವುದ ರಿಂದ ಅಂತರ್ಜಲ ವೃದ್ಧಿಯಾಗಿ ಕೊಳವೆ ಬಾವಿಗಳು ಪುನರ್ಜೀವನಗೊಂಡು ಜನ, ಜಾನುವಾರುಗಳು, ಪ್ರಾಣಿ-ಪಕ್ಷಿಗಳು, ಈ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
Related Articles
Advertisement
ಶಿಕ್ಷಣ, ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು: ತಾವು, ಶಾಸಕರಾದ ಅವಧಿಯಿಂದಲೂ ಶಿಕ್ಷಣ, ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು ನನೆಗುದಿಗೆ ಬಿದ್ದಿರುವ ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅನುಕೂಲ ಕಲ್ಪಿಸಲಾಗಿದೆ. ಜಲ ಜೀವನ್ ಯೋಜನೆಯಡಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕೆಂಬ ಉದ್ದೇಶದಿಂದ ದೇಶಹಳ್ಳಿ ಕೆರೆಯಿಂದ ನೀರು ಪೂರೈಕೆ ಮಾಡಲು ಕ್ರಮವಹಿಸಿದ್ದು, ಈಗಾಗಲೇ ಪೈಪ್‌ಲೈನ್, ನೀರು ಶೇಖರಣಾ ಘಟಕಗಳ ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು.
ಈ ವೇಳೆ ಟಿಎಪಿಸಿಎಂಎಸ್ ನಿರ್ದೇಶಕ ಕೂಳಗೆರೆ ಶೇಖರ್, ಮುಖಂಡರಾದ ಮಾದನಾಯಕನಹಳ್ಳಿ ರಾಜಣ್ಣ, ಸೋಮಣ್ಣ, ತಿಪ್ಪೂರು ರಾಜೇಶ್, ನವೀನ್, ಹೊನ್ನೇಗೌಡ, ರಾಮಲಿಂಗಯ್ಯ, ಚಿಕ್ಕತಮ್ಮೇಗೌಡ, ಕೆಂಗಲ್‌ಗೌಡ, ಪಿ.ಹರೀಶ್ ಇತರರಿದ್ದರು.