Advertisement

ನೀರಿನ ಬವಣೆ: ಖಾಲಿ ಕೊಡದೊಂದಿಗೆ ಪ್ರತಿಭಟನೆ

08:41 AM Mar 12, 2019 | Team Udayavani |

ಕಲಬುರಗಿ: ತಾಲೂಕಿನ ಹಾಗರಗಿ ಗ್ರಾಪಂ ವ್ಯಾಪ್ತಿಯ ಆಜಾಧಪುರದಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಹಾಗೂ ಇತರ ಸಮಸ್ಯೆಗಳ ಇತ್ಯರ್ಥಕ್ಕೆ ಆಗ್ರಹಿಸಿ ರಾಜ್ಯ ದಲಿತ ಸಂಘರ್ಷಸಮಿತಿ (ಕ್ರಾಂತಿಕಾರಿ) ನೇತೃತ್ವದಲ್ಲಿ ಗ್ರಾಮಸ್ಥರು ಖಾಲಿ ಕೊಡಗಳನ್ನು ತಲೆ ಮೇಲೆ ಹೊತ್ತುಕೊಂಡು ಪ್ರತಿಭಟನೆ ನಡೆಸಿದರು.

Advertisement

ನಗರದ ಜಗತ್‌ ವೃತ್ತದಿಂದ ಜಿಪಂ ಕಚೇರಿವರೆಗೆ ಖಾಲಿಕೊಡಗಳೊಂದಿಗೆ ಪ್ರತಿಭಟನೆ ನಡೆಸಿ ಪ್ರತಿಭಟನಾಕಾರರು ಜಿಪಂ ಸಿಇಒಗೆ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಕೃಷಿ ಕೂಲಿ ಕಾರ್ಮಿಕರು ಕೆಲಸ ಬಿಟ್ಟು ಬೆಳಗ್ಗೆ ದೂರದವರೆಗೆ ನೀರು ಹುಡುಕಿ ತರುವುದು ದೊಡ್ಡ ಕೆಲಸವಾಗಿದೆ ಎಂದು ಹೇಳಿದರು.

ಗ್ರಾಪಂನಿಂದ ಈವರೆಗೆ ಗ್ರಾಮದಲ್ಲಿ ನಾಲ್ಕು ಕೊಳವೆ ಬಾವಿ ಕೊರೆಯಲಾಗಿದ್ದರು ಅವುಗಳಿಗೆ ವಿದ್ಯುತ್‌ ಮೋಟಾರ್‌ ಅಳವಡಿಸಿಲ್ಲ ಹಾಗೂ ಕೊಳವೆ ಬಾವಿ ತೋಡಿದ ಬಿಲ್‌ 2,88,840 ರೂ. ಸಹ ಪಾವತಿಸಿಲ್ಲ. ಈ ಬಗ್ಗೆ ಗ್ರಾಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರೂ ಬೇಡಿಕೆಗೆ ಸ್ಪಂದಿಸಿಲ್ಲ ಎಂದರು. 

ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ಮಾಡಿದ್ದರೂ ಗ್ರಾಪಂ ಅಧ್ಯಕ್ಷರು ಉದ್ದೇಶಪೂರ್ವಕವಾಗಿ ಬಿಲ್‌ ಪಾವತಿಸಿಲ್ಲ, ಗ್ರಾಪಂ ಕರ ವಸೂಲಿ ದುರುಪಯೋಗದ ಆರೋಪವಿದ್ದರೂ ಅವರ ಮೇಲೆ ಯಾವ ಕ್ರಮಕೈಗೊಂಡಿಲ್ಲ. ಈ ಎಲ್ಲ ಸಮಸ್ಯೆಗಳ ಬಗ್ಗೆ ಯಾವ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

Advertisement

ಗ್ರಾಪಂನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಲ್ಲ. ಇದರಿಂದ ಗ್ರಾಪಂ ಅಧ್ಯಕ್ಷರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಅದರಿಂದ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಆಗುತ್ತಿಲ್ಲ. ಕೂಡಲೇ ಕೊಳವೆಬಾವಿಗಳ ಬಾಕಿ ಬಿಲ್‌ ಪಾವತಿಸುವುದರೊಂದಿಗೆ ವಿದ್ಯುತ್‌ ಸಂಪರ್ಕ ಒದಗಿಸಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು ಎಂದು ಒತ್ತಾಯಿಸಿದರು.

ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಆಜಾಧಪುರ, ಸಂತೋಷ ಗದ್ದಿ, ಆನಂದ ಗದ್ದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next