Advertisement
ಕಳೆದ ವಾರದಿಂದ ಕೊಡಗು ಸೇರಿದಂತೆ ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ದಿನದಿಂದ ದಿನಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಈಗಾಗಲೇ ಒಳಹರಿವು 40 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದ್ದು, 110.10 ಅಡಿ ನೀರು ಸಂಗ್ರಹವಾಗಿದೆ.
ಜಲಾಶಯದ ಒಳಹರಿವಿನಲ್ಲಿ ಹೆಚ್ಚಾಗುತ್ತಿರುವುದರಿಂದ ಯಾವ ಸಂದರ್ಭದಲ್ಲಾದರೂ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಹರಿಸುವ ಸಾಧ್ಯತೆ ಇರುವುದರಿಂದ ನದಿ ಪಾತ್ರದ ಜನರು, ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕಳೆದ ವರ್ಷ ಇದೇ ರೀತಿ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿಬಿಟ್ಟಿದ್ದರಿಂದ ಕೆಲವು ಗ್ರಾಮಗಳಿಗೆ ನೀರು ನುಗ್ಗಿತ್ತು. ಅಲ್ಲದೆ, ಬೆಳೆಗಳು ನಾಶವಾಗಿದ್ದವು. ಜಲಾಶಯ ಭರ್ತಿಗೆ 14.80 ಅಡಿ ಬಾಕಿ:
ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಭಾನುವಾರ ಸಂಜೆಗೆ 110.10 ಅಡಿ ತಲುಪಿತ್ತು. ಇನ್ನೂ 14.80 ಅಡಿ ಬಾಕಿ ಉಳಿದಿದೆ. ಒಳಹರಿವು 40 ಸಾವಿರ ಕ್ಯೂಸೆಕ್ ಇದ್ದರೆ, ಹೊರಹರಿವು 10 ಸಾವಿರ ಕ್ಯೂಸೆಕ್ ಇದೆ. 31.821 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 107.27 ಅಡಿ ಇತ್ತು. ಒಳಹರಿವು 3256 ಕ್ಯೂಸೆಕ್, ಹೊರಹರಿವು 6014 ಕ್ಯೂಸೆಕ್ ಇತ್ತು.