Advertisement

ಹೊನ್ನಾಳಿ-ನ್ಯಾಮತಿ ಕೆರೆಗಳಿಗೆ ಶೀಘ್ರ ನೀರು: ರೇಣು

05:06 PM Apr 18, 2022 | Team Udayavani |

ಹೊನ್ನಾಳಿ: ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಸರ್ಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ದೃಷ್ಟಿಯಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಎಂಬ ಕಾರ್ಯಕ್ರಮದಡಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ. ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

Advertisement

ನ್ಯಾಮತಿ ತಾಲೂಕಿನ ಜೀನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯ ಬೇಕಾಗಿತ್ತು. ಆದರೆ ಇದೀಗ ಅಧಿಕಾರಿಗಳೇ ಜನರ ಮನೆಬಾಗಿಲಿಗೆ ಬಂದು ಅವರ ಸಮಸ್ಯೆ ಆಲಿಸುವ ಜೊತೆಗೆ ಸ್ಥಳದಲ್ಲೇ ಅವುಗಳನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಜನರು ಸರ್ಕಾರಿ ಕಚೇರಿಗೆ ಅಲೆಯುವುದು ತಪ್ಪಿದಂತಾಗಿದೆ ಎಂದರು.

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳು ನೀರಾವರಿ ಸೌಲಭ್ಯ ವಂಚಿತರಾಗಿದ್ದರು. ಇದರಿಂದ ರೈತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಇದನ್ನು ಮನಗಂಡು ಶಾಶ್ವತ ನೀರಾವರಿ ಯೋಜನೆ ಮಾಡಬೇಕೆಂಬ ಉದ್ದೇಶದಿಂದ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಎಲ್ಲಾ ಕೆರೆಗಳನ್ನು 518 ಕೋಟಿ ರೂ. ವೆಚ್ಚದಲ್ಲಿ ಭರ್ತಿ ಮಾಡಲಾಗುತ್ತಿದ್ದು, ಶೀಘ್ರದಲ್ಲೇ ಅವಳಿ ತಾಲೂಕಿನ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಮದ 27 ಜನರಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದ ರೇಣುಕಾಚಾರ್ಯ, ಕೋವಿಡ್‌ನಿಂದ ಮೃತಪಟ್ಟವರಿಗೆ ಒಂದು ಲಕ್ಷ ರೂ. ಪರಿಹಾರ ಚೆಕ್‌ ವಿತರಿಸಿದರು. ವೈಯಕ್ತಿಕವಾಗಿ ಹತ್ತು ಸಾವಿರ ರೂ. ಪರಿಹಾರ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಗರ್ಭಿಣಿಯರಿಗೆ ಸೀಮಂತ ನಡೆಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next