Advertisement
ನಾಡಿನ ನದಿ ನೀರು ಬಳಕೆ ಹಾಗೂ ಜನರಿಗೆ ಜಲ ಭದ್ರತೆ ನೀಡುವ ಉದ್ದೇಶದಿಂದ ದೀರ್ಘಕಾಲೀನ ಅನುಕೂಲತೆಯ ಜನತಾ ಜಲಧಾರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ರಾಜ್ಯದಲ್ಲಿ ನದಿ ಉಪನದಿಗಳು ಸೇರಿ 38 ಜೀವನದಿಗಳಿವೆ. ಅವುಗಳ ಜಲ ಸಂಗ್ರಹ ಮಾಡಿ, ನೀರಿನ ಬಳಕೆಯ ಬಗ್ಗೆ ನಾಡಿನ ಜನರಿಗೆ ಅರಿವು ಮೂಡಿಸುವ ಹಾಗೂ ರಾಜ್ಯದ ನೀರಾವರಿ ಹಿತಾಸಕ್ತಿಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ದೊಡ್ಡ ಪ್ರಮಾಣದಲ್ಲಿ ಈ ಜಲಧಾರೆ ಕಾರ್ಯಕ್ರಮ ರೂಪಿಸಲಾಗಿದೆ. ಶೀಘ್ರದಲ್ಲೇ ಈ ಕುರಿತು ಸಮಗ್ರ ನೀಲನಕ್ಷೆ ಬಹಿರಂಗಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
Related Articles
Advertisement
ಕೋರ್ ಕಮಿಟಿ ಶೀಘ್ರ ರಚನೆಶೀಘ್ರ ಜೆಡಿಎಸ್ ಕೋರ್ ಕಮಿಟಿ ರಚನೆ ಮಾಡಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆದ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. “ಉದ್ದೇಶಿತ ಸಮಿತಿಯಲ್ಲಿ ಯಾರ್ಯಾರು ಇರುತ್ತಾರೆ ಎನ್ನುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಯಾರು ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೋ ಅಂತಹವರನ್ನು ನೇಮಕ ಮಾಡುತ್ತೇವೆ. 2023ರ ಗುರಿ ಸಾಧನೆಗೆ ಪ್ರಯತ್ನಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಮುಂಬೈ ಕರ್ನಾಟಕ ಹೆಸರನ್ನು ಈಗ ಕಿತ್ತೂರು ಕರ್ನಾಟಕ ಅಂತ ಹೆಸರು ಬದಲಾಯಿಸಿದ್ದಾರೆ. ಅದನ್ನೇ ಸಿಹಿ ಹಂಚಿ ಸಂಭ್ರಮಿಸುವ ಅಗತ್ಯ ಇಲ್ಲ. ಹೈದರಾಬಾದ್ ಕರ್ನಾಟಕದ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬದಲಿಸಿದ್ದಾರೆ. ಆದರೆ, ಅಲ್ಲಿನ ಜನರ ಬದುಕು ಬದಲಾಗಿದೆಯೇ? ಈಗಲೂ ಅಲ್ಲಿನ ಜನ ಕಷ್ಟದಲ್ಲಿ ಬದುಕುತ್ತಿದ್ದಾರೆ. ಇದು ರಾಷ್ಟ್ರೀಯ ಪಕ್ಷಗಳ ನಡವಳಿಕೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು.