ವರಿದಿದ್ದು, ಮಂಡ್ಯ, ಮೈಸೂರು ಸೇರಿ ಹಲವೆಡೆ ರೈತಸಂಘ, ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರವೂ ಪ್ರತಿಭಟನೆ ನಡೆದಿದೆ. ಮಂಡ್ಯದಲ್ಲಿ ಹೆದ್ದಾರಿ ತಡೆಯಲು ಯತ್ನಿಸಿದ ರೈತಸಂಘ (ಮೂಲ ಸಂಘಟನೆ)ದ ಕಾರ್ಯಕರ್ತರನ್ನು ಪೊಲೀಸರು ಬಂಧಿ ಸಿ ಅನಂತರ ಸಂಜೆ ವೇಳೆಗೆ ಬಿಡುಗಡೆ ಮಾಡಿದರು.
Advertisement
ವಿವಿಧೆಡೆಗಳಿಂದ ಆಗಮಿಸಿದ ರೈತ ಸಂಘದ ಕಾರ್ಯಕರ್ತರು ಮಂಡ್ಯ ತಾಲೂಕು ಇಂಡುವಾಳು ಗ್ರಾಮದ ಬಳಿ ಜಮಾಯಿಸಿ, ಸರ್ವೀಸ್ ರಸ್ತೆಯಲ್ಲಿ ಮೆರವಣಿಗೆ ಮೂಲಕ ತೆರಳಿದರು. ಘೋಷಣೆ ಮೊಳಗಿಸುತ್ತ ರೈತರು ಎಕ್ಸ್‌ಪ್ರೆಸ್ ಹೈವೆಗೆ ನುಗ್ಗಲು ಮುಂದಾದಾಗ ಪೊಲೀಸರು ತಡೆದರು. ಈ ವೇಳೆ ಪರಸ್ಪರ ತಳ್ಳಾಟ-ನೂಕಾಟ ಉಂಟಾಗಿ ಪೊಲೀಸರು ಪ್ರತಿಭಟನನಿರತ ರೈತರನ್ನು ಬಲಪ್ರಯೋಗಿಸಿ ಬಂ ಧಿಸಿದರು. ಐದಾರು ರೈತರಿಗೆ ಸಣ್ಣಪುಟ್ಟ ಗಾಯಗಳಾದವು. ಇದರಿಂದ ಕುಪಿತಗೊಂಡ ರೈತರು ಪೊಲೀಸರ ದೌರ್ಜನ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ರೈತರು ಅಡ್ಡಿಪಡಿಸಿದರು. ಇದರಿಂದ ಅರ್ಧ ತಾಸಿಗೂ ಹೆಚ್ಚು ಸಮಯ ವಾಹನ ಸಂಚಾರ ಅಸ್ತವ್ಯಸ್ತವಾಯಿತು.
ತಮಿಳುನಾಡು ಒತ್ತಡಕ್ಕೆ ಮಣಿದು ಕಾವೇರಿ ನೀರನ್ನು ಹರಿಯಲು ಬಿಡಲಾಗಿದೆ ಎಂದು ಆರೋಪಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಇರುವ ರಾಜ್‌ಕುಮಾರ್ ಉದ್ಯಾನವನದ ಮುಂಭಾಗ ಪ್ರತಿಭಟನೆ ನಡೆಯಿತು. ಸಿಎಂ ಅಧ್ಯಕ್ಷತೆಯಲ್ಲಿ ಬುಧವಾರ ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಅಂತಿಮವಾಗಿ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ. ಜೆಡಿಎಸ್, ಬಿಜೆಪಿ ನಾಯಕರು ನೀರಿನ ಮೇಲೆ ರಾಜಕೀಯ ಮಾಡಬಾರದು. ತಮಿಳುನಾಡಿನ ಪರ ತೀರ್ಪು ಬಂದಿದ್ದರೆ 20 ಸಾವಿರ ಕ್ಯೂಸೆಕ್ ನೀರು ಬಿಡಬೇಕಾಗುತ್ತಿತ್ತು. ಹೀಗಾಗಿ 10 ಸಾವಿರ ಕ್ಯೂಸೆಕ್ ಅಷ್ಟೇ ನೀರು ಬಿಟ್ಟಿದ್ದೇವೆ.
– ಎನ್. ಚಲುವರಾಯಸ್ವಾಮಿ, ಕೃಷಿ ಸಚಿವ