Advertisement

ಜಲಾಶಯದಿಂದ ಕೃಷ್ಣಾ ನದಿಗೆ ನೀರು ಸಾಧ್ಯತೆ

05:32 PM Jun 24, 2022 | Team Udayavani |

ನಾರಾಯಣಪುರ: ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬಸವಸಾಗರ ಜಲಾಶಯಕ್ಕೆ ಒಂದೊಮ್ಮೆ ಒಳ ಹರಿವು ಹೆಚ್ಚಾಗಿ ಜಲಾಶಯದ ಗರಿಷ್ಠ ಮಟ್ಟಕ್ಕೆ ನೀರು ಬಂದರೆ ಜಲಾಶಯದಿಂದ ಕೃಷ್ಣಾ ನದಿಗೆ ಯಾವುದೇ ಸಂದರ್ಭದಲ್ಲಿ ನೀರು ಹರಿಬಿಡುವ ಸಾಧ್ಯತೆಗಳಿದ್ದು, ಹೀಗಾಗಿ ನದಿ ತೀರದ ಗ್ರಾಮಗಳ ಜನ ಜಾನುವಾರುಗಳು ನದಿಗೆ ಇಳಿಯದಂತೆ ಮುಂಜಾಗ್ರತೆ ವಹಿಸಬೇಕೆಂದು ಕೃಷ್ಣಾ ಭಾಗ್ಯ ಜಲ ನಿಗಮದ ಅಣೆಕಟ್ಟು ವಿಭಾಗದ ಪ್ರಭಾರ ಕಾರ್ಯನಿರ್ವಾಹಕ ಎಂಜಿನಿಯರ್‌ ಎಂ. ಪ್ರಕಾಶ ತಿಳಿಸಿದರು.

Advertisement

ಪತ್ರಿಕೆಗೆ ಮಾಹಿತಿ ನೀಡಿರುವ ಅವರು, ಹವಾಮಾನ ಇಲಾಖೆ ಪ್ರಕಾರ ಜೂ. 24ರಿಂದ ಜೂ. 26ರವರೆಗೂ ಕರ್ನಾಟಕದ ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು ಹಾಗೂ ಕಲಬುರ್ಗಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಜಲಾಶಯದಲ್ಲಿ 492.25 ಮೀಟರ್‌ ನೀರಿನ ಮಟ್ಟದಲ್ಲಿ 490.97 ಮೀಟರಿಗೆ ನೀರು ಇದ್ದು 27.72 ಟಿಎಂಸಿ ಇದೆ. ಜಲಾಶಯ ಭರ್ತಿಗೆ 5 ಟಿಎಂಸಿ ಅಡಿ ನೀರಿನ ಅವಶ್ಯಕತೆ ಇದೆ.

ಒಂದೊಮ್ಮೆ ಬಸವಸಾಗರ ಜಲಾಶಯಕ್ಕೆ ಒಳಹರಿವು ಆರಂಭವಾದರೆ ಯಾವುದೇ ಸಂದರ್ಭದಲ್ಲಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತದೆ ಹೀಗಾಗಿ ಅಣೆಕಟ್ಟು ಕೆಳ ಭಾಗದ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಕೃಷ್ಣಾ ನದಿ ಪಾತ್ರಗಳ ಗ್ರಾಮಗಳ ಜನ, ಜಾನುವಾರುಗಳ ಸುರಕ್ಷತೆಗೆ ಎರಡು ಜಿಲ್ಲಾಡಳಿತಗಳಿಗೆ ಪ್ರವಾಹ ಮುನ್ಸೂಚನೆ ಕುರಿತು ಅಗತ್ಯ ಕ್ರಮ ವಹಿಸುವಂತೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು. ಎ.ಇ. ಬಾಲಸುಬ್ರಹ್ಮಣ್ಯಂ, ವಿಜಯ ಅರಳಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next