Advertisement
ಎತ್ತಿನ ಹೊಳೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದ ನೀವೇ ಈಗ ಆ ಯೋಜನೆಯನ್ನು ಕಾರ್ಯಗತ ಮಾಡಲು ಹೊರಟಿದ್ದೀರಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನೀರಿನ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ ಎಂದರು.
ಪರಿಸ್ಥಿತಿಯ ಅವಲೋಕನ ಮಾಡುತ್ತಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯದಲ್ಲಿ ನೀರಿನ ಸಮಸ್ಯೆ ಉಲ್ಬಣವಾಗದಂತೆ ಗಮನಹರಿಸಲು ಸೂಚನೆ ನೀಡಿದ್ದೇನೆ ಎಂದರು. ಎತ್ತಿನ ಹೊಳೆಯನ್ನು ಉತ್ತರ ಭಾಗಕ್ಕೆ ಕೊಂಡೊಯ್ಯುವ ವಿಚಾರವಾಗಿ ಮಾತ ನಾಡಿದ ಅವರು ಕೇವಲ ಉತ್ತರ ಕರ್ನಾಟಕ ಭಾಗವಷ್ಟೇಯಲ್ಲ. ರಾಜ್ಯದ ಎಲ್ಲ ರೈತರು ನಮ್ಮವರೇ ಹಾಗಾಗಿ ಅವರ ಹಿತ ಕಾಪಾಡ ಬೇಕಾಗುತ್ತದೆ. ಜೊತೆಗೆ ನಮ್ಮ ಜವಾಬ್ದಾರಿ ಕೂಡಾ ಹಾಗಾಗಿ ರಾಜ್ಯದಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಲಾಗುವುದು ಎಂದರು.
Related Articles
ಕೆಲವು ತಜ್ಞರ ಪ್ರಕಾರ ಇಲ್ಲಿ 8 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂದು ವರದಿ ಇದೆಯಲ್ಲ ಎಂಬ ಮಾತಿಗೆ ನಾವು ಕೂಡ ಸರ್ವೆ ಮಾಡಿಸಿದ್ದೇವೆ ಇಲ್ಲಿ 24.1 ಟಿಎಂಸಿ
ನೀರು ಬರುವ ಎಲ್ಲಾ ಸಾಧ್ಯತೆಗಳು ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚೆಕ್ ಡ್ಯಾಮ್ ಕಾಮಗಾರಿ ಮುಗಿಯುವ ಹಂತಕ್ಕೆ ತಲುಪಿದೆ ಎಂದರು.
Advertisement
ಈ ಸಂದರ್ಭದಲ್ಲಿ ಶಾಸಕ ಎಚ್. ಕೆ.ಕುಮಾರಸ್ವಾಮಿ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಬೇಲೂರು ಶಾಸಕ ಲಿಂಗೇಶ್, ಜಿ.ಪಂ ಅಧ್ಯಕ್ಷೆ ಶ್ವೇತಾ ದೇವರಾಜ್, ವಿಶ್ವೇಶ್ವರಯ್ಯ ನೀರಾವರಿನಿಗಮದ ಅಧಿಕಾರಿಗಳು ಹಾಜರಿದ್ದರು.