Advertisement
ಸೋಮವಾರ ವಿಶ್ವ ಬ್ಯಾಂಕ್ ನೆರವಿನ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆಯಡಿ ಮಹಾನಗರದಲ್ಲಿ 24/7 ನಿರಂತರ ನೀರು ಸರಬರಾಜು ಕಾಮಗಾರಿ ಅನುಷ್ಠಾನದ ಕುರಿತು ನಿರ್ವಾಹಕರಾದ ಮೆ| ಲಾರ್ಸನ್ ಮತ್ತು ಟುಬ್ರೂ (ಎಲ್ ಆ್ಯಂಡ್ ಟಿ) ವತಿಯಿಂದ ಪಾಲಿಕೆ ಸದಸ್ಯರಿಗೆ ಆಯೋಜಿಸಲಾಗಿದ್ದ ಯೋಜನಾ ಪರಿಚಯ ಕಾರ್ಯಕ್ರಮದಲ್ಲಿ ಕಂಪನಿ ಅಧಿಕಾರಿಗಳನ್ನು ಸದಸ್ಯರು ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್ ಸದಸ್ಯರಾದ ಮಂಜುನಾಥ ಬಟಕುರ್ಕಿ, ದೀಪಾ ನೀರಲಕಟ್ಟಿ, ಇಕ್ಬಾಲ ನವಲೂರ, ಆರೀಫ ಭದ್ರಾಪುರ ಇತರರು ಆಕ್ಷೇಪ ವ್ಯಕ್ತಪಡಿಸಿದರು.
Related Articles
Advertisement
ವಾಲ್‌ವುನ್‌ಗಳ ಸಮಸ್ಯೆ: ಅವಳಿನಗರದಲ್ಲಿರುವ 583 ಗುತ್ತಿಗೆ ಆಧಾರಿತ ವಾಲ್‌ವುನ್‌ಗಳ ನೇಮಕ ಸಮಸ್ಯೆ ನೀರು ಸರಬರಾಜು ವ್ಯತ್ಯಯಕ್ಕೆ ಕಾರಣ. ಅವರು ಎಲ್ ಆ್ಯಂಡ್ ಟಿ ಮತ್ತು ಪಾಲಿಕೆಗೆ ನೋಂದಣಿ ಮಾಡಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಪರ್ಯಾಯವಾಗಿ ಸೂಕ್ತ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ ಎಂದು ಪಾಲಿಕೆ ಆಯುಕ್ತರು ವ್ಯಕ್ತಪಡಿಸಿದರು. ಈ ವೇಳೆ ಓರ್ವ ಸದಸ್ಯರು ಮೈಸೂರು ಮಾದರಿಯಲ್ಲಿ ಅವರನ್ನು ನೇಮಕ ಮಾಡಿಕೊಳ್ಳಬಹುದಲ್ಲ ಎಂದಾಗ, ನ್ಯಾಯಾಲಯದಲ್ಲಿ ಪ್ರಕರಣ ಇರುವ ಕಾರಣ ಏನು ಮಾಡಲು ಸಾಧ್ಯವಿಲ್ಲ ಎಂದರು.
ಕುಡಿಯುವ ನೀರಿಗೆ ಆದ್ಯತೆ: ಮುಂದಿನ 10 ವರ್ಷಗಳಲ್ಲಿ ಈ ಯೋಜನೆಯನ್ನು ಮಾದರಿಯಾಗಿ ಪರಿವರ್ತಿಸಲಾಗುವುದು. ಕಳೆದ ಏಪ್ರಿಲ್, ಮೇ ತಿಂಗಳಲ್ಲಿ ನೀರಿನ ಸಮಸ್ಯೆ ಸಾಕಷ್ಟು ಉಲ್ಬಣಗೊಂಡಿತ್ತು. ನವನಗರ ಹಾಗೂ ಹಳೇ ಹುಬ್ಬಳ್ಳಿ ಭಾಗದಲ್ಲಿ ಸಾಕಷ್ಟು ಸಮಸ್ಯೆಯಾಗಿತ್ತು. ಆಗ ಹಲವು ಸದಸ್ಯರು ಸಮಸ್ಯೆ ಪರಿಹಾರಕ್ಕೆ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಈಗ ಸ್ವಲ್ಪ ಸುಧಾರಣೆಗೊಂಡಿದೆ. ಈ ಯೋಜನೆಯಲ್ಲಿ ವಿಶ್ವಬ್ಯಾಂಕ್ ಶೇ.67, ಪಾಲಿಕೆ ಶೇ.27, ರಾಜ್ಯ ಸರಕಾರ ಶೇ.7 ಅನುದಾನ ನೀಡಿದೆ ಎಂದು ಪಾಲಿಕೆ ಆಯುಕ್ತ ಡಾ| ಗೋಪಾಲಕೃಷ್ಣ ಬಿ. ಸದಸ್ಯರಿಗೆ ಮಾಹಿತಿ ನೀಡಿದರು.
ಎಲ್ ಆ್ಯಂಡ್ ಟಿ ಕಂಪನಿಯಿಂದ ಶಿಲ್ಪಾ ಜೋಶಿ ಯೋಜನೆ ಬಗ್ಗೆ ಪರಿಚಯಿಸಿದರು. ಪಾಲಿಕೆ ಉಪ ಮಹಾಪೌರ ಉಮಾ ಮುಕುಂದ ಸೇರಿದಂತೆ ಪಾಲಿಕೆ ಸದಸ್ಯರು, ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
24ರಂದು ಸ್ವಚ್ಛ ಭಾರತ ಕಾರ್ಯಕ್ರಮ
ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಜೂ. 24 ಮತ್ತು 25ರಂದು ಅವಳಿನಗರದಲ್ಲಿ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ. 24ರಂದು 3 ಸಾವಿರ ಗಿಡಗಳನ್ನು ನೆಡಲಾಗುವುದು. ಶಾಲಾ ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಘನತ್ಯಾಜ್ಯ ನಿರ್ವಹಣೆ ಆವಿಷ್ಕಾರ ಪ್ರದರ್ಶನ ಹಾಗೂ 25ರಂದು ಬೆಳಗ್ಗೆ ಫ್ಲಾಗ್ ಆ್ಯಂಥಮ್ ಹಮ್ಮಿಕೊಂಡಿದ್ದು, ಪ್ರತಿ ವಾರ್ಡ್‌ಗಳಿಂದ ಕಸ ಸಂಗ್ರಹಣೆ ಮಾಡಿಕೊಂಡು ಬಂದು ಹುಬ್ಬಳ್ಳಿಯ ಕಿತ್ತೂರು ಚನ್ನಮ್ಮ ವೃತ್ತ ಹಾಗೂ ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ಕೊಡುವುದು.
ಮಧ್ಯಾಹ್ನ ಪಂ| ವೆಂಕಟೇಶಕುಮಾರ ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆಯುಕ್ತ ಡಾ. ಗೋಪಾಲಕೃಷ್ಣ ಬಿ. ತಿಳಿಸಿದರು. ಈ ಕಾರ್ಯಕ್ರಮಗಳ ಕುರಿತ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.