Advertisement
ತಾಲೂಕಿನ ಮುದುವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನೀರಿನ ಸಂರಕ್ಷಣೆ ಕುರಿತು ಆಯೋಜಿಸಿದ್ದ ಜಲಶಕ್ತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಗಿಡ ನೆಟ್ಟು ಮಳೆ ಪ್ರಮಾಣ ಹೆಚ್ಚಿಸಿ: ಸಕಲ ಜೀವ ಸಂಕುಲಕ್ಕೂ ನೀರನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕೆರೆ, ಕುಂಟೆ, ಬಾವಿಗಳನ್ನು ಉಳಿಸುವುದು ಎಲ್ಲರ ಕೆಲಸವಾಗಬೇಕು. ನೀರು ಪೋಲಾಗುವುದನ್ನು ತಡೆಗಟ್ಟುವ ಕಡೆ ಗಮನ ಹರಿಸಬೇಕು. ಮಳೆ ನೀರಿನ ಕೊಯ್ಲನ್ನು ಬಳಸಿಕೊಂಡು ನೀರು ವ್ಯರ್ಥವಾಗುವುದನ್ನು ತಡೆಗಟ್ಟಬೇಕು. ಇದರ ಜೊತೆಗೆ ಗಿಡಗಳನ್ನು ನೆಡುವ ಮೂಲಕ ಮಳೆ ಪ್ರಮಾಣ ಹೆಚ್ಚಿಸುವಂತೆ ಮಾಡಬೇಕು.
ಅಂತರ್ಜಲ ಹೆಚ್ಚಳಕ್ಕೆ ಕೆ.ಸಿ.ವ್ಯಾಲಿ: ಜಿಲ್ಲೆಯು ಸತತ ಬರಗಾಲದಿಂದ ಆವರಿಸಿದೆ. ಅಂತರ್ಜಲ ಮಟ್ಟವು ಸಂಪೂರ್ಣ ಕುಸಿದಿದೆ. 1500 ಅಡಿ ಕೊರೆದರೂ ನೀರು ದೊರೆಯುತ್ತಿಲ್ಲ. ಹಾಗಾಗಿ ಅಂತರ್ಜಲ ಮಟ್ಟವನ್ನು ವೃದ್ಧಿಸಲು ಕೆ.ಸಿ. ವ್ಯಾಲಿ ಮೂಲಕ ಜಿಲ್ಲೆಯ 136 ಕೆರೆಗಳಿಗೆ ನೀರನ್ನು ಹರಿಸಲಾಗುತ್ತಿದೆ. ಈಗಾಗಲೇ 18 ಕೆರೆಗಳು ತುಂಬಿದ್ದು, ಉಳಿದ ಕೆರೆಗಳಿಗೂ ನೀರು ಹರಿಸಲಾಗುವುದು. ಇದರಿಂದ ಅಂತರ್ಜಲ ಅಭಿವೃದ್ಧಿಯಾಗಲಿದೆ ಎಂದರು.
ವಿದ್ಯಾರ್ಥಿಗಳಿಂದ ನೀರಿನ ಸಂರಕ್ಷಣೆ: ಬದಲಾವಣೆಯು ಸದಾ ಮಕ್ಕಳಿಂದಲೇ ಪ್ರಾರಂಭವಾಗುವುದು ಸೂಕ್ತ. ವಿದ್ಯಾರ್ಥಿಗಳು ಪ್ರತಿಯೊಬ್ಬರೂ ನೀರನ್ನು ಸಂರಕ್ಷಿಸುವ ಕೆಲಸವನ್ನು ಮಾಡಿದ್ದೇ ಆದಲ್ಲಿ ಇದರಿಂದ ಪೋಷಕರು ಹಾಗೂ ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳು ಮೂಡುತ್ತವೆ. ಈ ನಿಟ್ಟಿನಲ್ಲಿ ಮಕ್ಕಳು ಇಡುವು ಒಂದು ಸಣ್ಣ ಹೆಜ್ಜೆಯು ದೇಶದಲ್ಲಿ ಅತಿ ದೊಡ್ಡ ಬದಲಾವಣೆಯನ್ನು ತರುತ್ತದೆ ಎಂದು ಹೇಳಿದರು.
ಮತ್ತಷ್ಟು ಶಕ್ತಿ ತುಂಬಿ: ಜಿಪಂ ಸಿಇಒ ಜಿ.ಜಗದೀಶ್ ಮಾತನಾಡಿ, ಮನುಷ್ಯನ ದುರಾಸೆಗಳಿಗೆ ಗೋಕುಂಟೆಗಳು, ಕಲ್ಯಾಣಿಗಳು, ಕೆರೆಗಳು ಮುಚ್ಚಿ ಹೋಗಿವೆ. ಪರಿಸರದ ಮೇಲೆ ಮನುಷ್ಯನ ದೌರ್ಜನ್ಯ ಹೆಚ್ಚಾಗಿದೆ. ಇದರಿಂದ ಜಿಲ್ಲೆಯು ನೀರಿನ ಸಮಸ್ಯೆ ಅನುಭವಿಸುವಂತಾಗಿದೆ. ಪರಿಸರವನ್ನು ಉಳಿಸಲು ಪ್ರತಿಯೊಬ್ಬರು ಸಸಿಗಳನ್ನು ನೆಡಬೇಕು. ಈ ಮೂಲಕ ಜಲಶಕ್ತಿ ಯೋಜನೆಗೆ ಮತ್ತಷ್ಟು ಶಕ್ತಿ ತುಂಬಬೇಕು ಎಂದು ತಿಳಿಸಿದರು.
ಪರಿಸರ ಉಳಿಸಬೇಕು: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ರತ್ನಯ್ಯ ಮಾತನಾಡಿ, ಇರುವುದೊಂದೆ ಭೂಮಿ. ಇಲ್ಲಿ ನೆಲ, ಜಲ, ಗಾಳಿ ಎಲ್ಲವೂ ಇದೆ. ಇದನ್ನು ಮುಂದಿನ ಪೀಳಿಗೆಗೆ ಉಳಿಸಿಕೊಡುವ ಮೂಲಕ ಪ್ರತಿಯೊಂದು ಜೀವ ಸಂಕುಲವು ಬದುಕಲು ಅವಕಾಶ ಮಾಡಿಕೊಡಬೇಕು. ಅಂತರ್ಜಲ ಅಭಿವೃದ್ಧಿಯಾಗಲು ಕೆರೆಗಳು ತುಂಬಬೇಕು. ಕೆರೆ ತುಂಬಲು ಮಳೆ ಬರಬೇಕು ಎಂದರು. ಜಿಪಂ ಸದಸ್ಯೆ ಪದ್ಮಾವತಿ, ಬಿಇಒ ನಾಗರಾಜಗೌಡ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮೈಲಾರಪ್ಪ, ತಾಪಂ ಇಒ ಬಾಬು, ಗ್ರಾಪಂ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷೆ ರತ್ನಮ್ಮ, ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಮುಖ್ಯ ಶಿಕ್ಷಕ ಶಂಕರೇಗೌಡ ಉಪಸ್ಥಿತರಿದ್ದರು.