Advertisement

ನೀರಿನ ಸಮಸ್ಯೆ: ಸೂಕ್ತ ಕ್ರಮಕ್ಕೆ ಶಾಸಕ ಕಾಮತ್‌ ಸೂಚನೆ

11:33 PM Apr 20, 2019 | Team Udayavani |

ಮಹಾನಗರ: ನಗರದಲ್ಲಿ ನೀರಿನ ರೇಷನ್‌ ಜನರಿಗೆ ಸಮಸ್ಯೆ ಯಾಗು ತ್ತಿದ್ದು, ಈ ಬಗ್ಗೆ ಸಮರ್ಪಕ ಕ್ರಮಗಳನ್ನು ಜರಗಿಸುವಂತೆ ಶಾಸಕ ವೇದವ್ಯಾಸ ಕಾಮತ್‌ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ತುಂಬೆ ಡ್ಯಾಂನಲ್ಲಿ ಮುಂದಿನ ದಿನಗಳಿಗೆ ಅಗತ್ಯವಿರುವಷ್ಟು ನೀರಿನ ಸಂಗ್ರಹವಿಲ್ಲ ಎನ್ನುವ ಕಾರಣಕ್ಕೆ ನಗರದಲ್ಲಿ ನೀರಿನ ರೇಷ ನ್‌ ಕ್ರಮ ಕೈಗೊಳ್ಳಲಾಗಿದೆ. ಜನರಿಗೆ ಸಮರ್ಪಕ ರೀತಿಯಲ್ಲಿ ನೀರನ್ನು ಒದಗಿಸುವುದು ಪಾಲಿಕೆಯ ಕರ್ತವ್ಯ. ಹಾಗಾಗಿ ತುಂಬೆ ಯಲ್ಲಿ ನೀರಿನ ಸಂಗ್ರಹವಿಲ್ಲ ಎನ್ನುವ ಏಕೈಕ ಕಾರಣವನ್ನು ಮುಂದಿಟ್ಟು ಜನರಿಗೆ ತೊಂದರೆಯನ್ನು ನೀಡುವುದು ಸರಿಯಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಶನಿವಾರ ಮಾತನಾಡಿದ್ದು , ಇಡೀ ನಗರದಲ್ಲಿ ನೀರಿನ ಸಮಸ್ಯೆಯಾಗದಂತೆ ಪರಿಸ್ಥಿತಿಯನ್ನು ಸರಿ ಯಾದ ರೀತಿಯಲ್ಲಿ ನಿಭಾಯಿಸುವಂತೆ ಸೂಚಿಸಿರುವುದಾಗಿ ಶಾಸಕರು ತಿಳಿಸಿದ್ದಾರೆ.

ತುಂಬೆ ಡ್ಯಾಂನಲ್ಲಿ ನೀರಿನ ಸಂಗ್ರಹದ ಗರಿಷ್ಠ ಮಟ್ಟ 6 ಮೀಟರ್‌. ಅಧಿಕಾರಿಗಳ ನೀಡಿರುವ ಮಾಹಿತಿ ಪ್ರಕಾರ ಸದ್ಯ 5.36 ಮೀಟರ್‌ ನೀರಿನ ಸಂಗ್ರಹವಿದೆ. ಅಂದರೆ ಸುಮಾರು 50 ದಿನಗಳಿಗೆ ಬೇಕಾಗುವಷ್ಟು ನೀರು ಲಭ್ಯವಿದೆ. ಅಲ್ಲದೆ ಎಎಂಆರ್‌ ಡ್ಯಾಂನಲ್ಲೂ ಗರಿಷ್ಠ ಮಟ್ಟದಲ್ಲಿ ನೀರಿನ ಸಂಗ್ರಹವಿದೆ. ಹಾಗಾಗಿ ಪಾಲಿಕೆಯ ಅಧಿ ಕಾರಿಗಳು ಅದನ್ನು ಸಮರ್ಪಕ ರೀತಿಯಲ್ಲಿ ಬಳಸಿಕೊಳ್ಳುವ ಬಗ್ಗೆ ಚಿಂತಿಸಿಬೇಕು, ಅದನ್ನು ಬಿಟ್ಟು ಕೇವಲ ರೇಷನಿಂಗ್‌ ಹೆಸರಿನಲ್ಲಿ ಜನರಿಗೆ ತೊಂದರೆಯನ್ನು ನೀಡುವುದು ಸರಿಯಲ್ಲ ಎಂದು ಅವರು ವಿವರಿಸಿದ್ದಾರೆ. ಎ. 18ರಿಂದ ನೀರು ರೇಷನ್‌ ಕ್ರಮ ಜಾರಿ ಯಾಗಿದೆ. ಎರಡು ದಿನಕ್ಕೊಮ್ಮೆ ನೀರು ಎಂದು ಜನರಿಗೆ ತಿಳಿಸಿದ್ದರೂ ಶನಿವಾರ ನಗರದ ಬಹುಭಾಗಕ್ಕೆ ನೀರು ತಲುಪಿಲ್ಲ. ಅಧಿಕಾರಿಗಳು ಈ ಬಗ್ಗೆ ಎಚ್ಚರಿಕೆಯಿಂದ ಕ್ರಮ ಜರಗಿಸುವ ಅಗತ್ಯವಿದೆ ಎಂದು ಅವರು ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next