Advertisement
ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಈಗಾಗಲೇ ಜಿಲ್ಲಾಡಳಿತವು ನಾಲ್ಕು ದಿನ ನೀರು ಪೂರೈಕೆ, ನಾಲ್ಕು ದಿನ ಸ್ಥಗಿತ ಮಾಡುವುದಾಗಿ ಪ್ರಕಟಿಸಿದೆ. ಈ ಸಂದರ್ಭದಲ್ಲಿ ಪಿಯು ತರಗತಿಗಳನ್ನು ಆರಂಭಿಸಿದರೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಹುದು ಎಂದು ಮುನ್ನೆಚ್ಚರಿಕೆಯಾಗಿ ಕೆಲವು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಪ್ರಮುಖರು ತರಗತಿ ಆರಂಭವನ್ನು ಮುಂದೂಡುವ ನಿರ್ಧಾರ ಕೈಗೊಂಡಿದ್ದಾರೆ. ಈ ಕಾಲೇಜುಗಳಲ್ಲಿ ಮೇ 27, 28 ದ್ವಿತೀಯ ಪಿಯುಸಿ ಮತ್ತು 29ರಂದು ಪ್ರಥಮ ಪಿಯುಸಿ ತರಗತಿಗಳು ಆರಂಭಗೊಳ್ಳಲಿವೆ. ಇನ್ನು ಕೆಲವು ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗಳು ಜೂನ್ ತಿಂಗಳಲ್ಲಿ ಆರಂಭಗೊಳ್ಳಲಿವೆ ಎಂಬುದಾಗಿ ಕಾಲೇಜು ಸಿಬಂದಿ ಮಾಹಿತಿ ನೀಡಿದ್ದಾರೆ.
Related Articles
ವಿದ್ಯಾರ್ಥಿ ನಿಲಯಗಳಲ್ಲಿ ನೀರು ಹೆಚ್ಚು ಬೇಕಾಗುತ್ತದೆ. ಆದರೆ ನೀರಿನ ಸಮಸ್ಯೆ ಇರುವಾಗ ನಿಗದಿತ ದಿನಾಂಕದಂದು ತರಗತಿ ಆರಂಭಿಸಿದರೆ ವಿದ್ಯಾರ್ಥಿಗಳ ಬಳಕೆಗೆ ನೀರಿಲ್ಲದಾಗುತ್ತದೆ. ಈ ಹಿನ್ನೆಲೆಯಲ್ಲಿ ತರಗತಿ ಆರಂಭ ಮುಂದೂಡಲಾಗಿದೆ ಎಂದು ನಗರದ ಕಾಲೇಜೊಂದರ ಉಪ ಪ್ರಾಂಶುಪಾಲರು “ಉದಯವಾಣಿ’ಗೆ ತಿಳಿಸಿದ್ದಾರೆ. ಆದರೆ ಸರಕಾರಿ ಕಾಲೇಜುಗಳಲ್ಲದೆ, ಬೆರಳೆಣಿಕೆಯಷ್ಟು ಖಾಸಗಿ ಕಾಲೇಜುಗಳಲ್ಲಿ ನಿಗದಿತ ದಿನಾಂಕದಂದೇ ತರಗತಿಗಳು ಆರಂಭವಾಗಿವೆ.
Advertisement