Advertisement

ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ತಾಕೀತು

02:30 PM Jun 23, 2018 | Team Udayavani |

ಕಲಬುರಗಿ: ಗ್ರಾಮೀಣ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳಬೇಕು. ಸಮಸ್ಯಾತ್ಮಕ ಗ್ರಾಮಗಳಿಗೆ ಅಗತ್ಯಬಿದ್ದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಬೇಕು ಎಂದು ಗ್ರಾಮೀಣ ಕ್ಷೇತ್ರದ ನೂತನ ಶಾಸಕ ಬಸವರಾಜ ಮತ್ತಿಮೂಡ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ಶುಕ್ರವಾರ ತಾಪಂ ಸಭಾಂಗಣದಲ್ಲಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕರು, ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಗ್ರಾಮಗಳನ್ನು ಗುರುತಿಸಿ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು. ಈ ನಿಟ್ಟಿನಲ್ಲಿ ನೀಲನಕ್ಷೆ ರೂಪಿಸಿ ಎಂದು ಸೂಚಿಸಿದರು. 

ರಾಜ್ಯದಾದ್ಯಂತ ಸಮರ್ಪಕ ಮಳೆಯಾಗಿ ಜಲಾಶಯಗಳು ಭರ್ತಿಯಾಗಿದೆ. ಆದರೆ ಜಿಲ್ಲೆಯಲ್ಲಿ ಇನ್ನೂ ಸಮರ್ಪಕವಾಗಿ ಮಳೆ ಆಗಿಲ್ಲ. ಈ ಸಂದರ್ಭದಲ್ಲಿ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಅಧಿಕಾರಿಗಳು ನಿಷ್ಕಾಳಜಿ ವಹಿಸದೇ ತುರ್ತು ಕ್ರಮ ಕೈಗೊಳ್ಳುವ ಮೂಲಕ ಕುಡಿಯುವ ನೀರು ಕಲ್ಪಿಸಬೇಕು ಎಂದು ತಾಕೀತು ಮಾಡಿದರು.

ಅಂಗನವಾಡಿಗಳಿಗೆ ಸೂಚನೆ: ಗ್ರಾಮೀಣ ಕ್ಷೇತ್ರಗಳಲ್ಲಿ ಅಂಗನವಾಡಿ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಹಲವಾರು ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಸ್ವಂತ ಕಟ್ಟಡಗಳನ್ನು ಹೊಂದಲು ಅಗತ್ಯ ಸ್ಥಳಗಳನ್ನು ಗುರುತಿಸಬೇಕು. ಈಗಾಗಲೇ ನಡೆಯುತ್ತಿರುವ ಕಾಮಗಾರಿಗಳನ್ನು ಚುರುಕಿನಿಂದ ಪೂರ್ಣಗೊಳಿಸಬೇಕು. ಇದರ ಜತೆಗೆ ಈಗ ನಡೆಯುತ್ತಿರುವ ರಸ್ತೆ ಕಾಮಗಾರಿಗಳನ್ನು
ಪೂರ್ಣಗೊಳಿಸಲು ಮುತುವರ್ಜಿ ವಹಿಸಬೇಕೆಂದರು.ವಿದ್ಯುತ್‌ ಸಮಸ್ಯೆ ಕುರಿತು ಅನೇಕ ದೂರುಗಳು ಬಂದಿವೆ. ಆದ್ದರಿಂದ ವಿದ್ಯುತ್‌ ಸರಬರಾಜಿಗೆ ಸಮಯ ನಿಗದಿ ಮಾಡಿ. ಆ ಪ್ರಕಾರ ವಿದ್ಯುತ್‌ ಒದಗಿಸಿ. ಹೀಗೆ ಮಾಡಿದಲ್ಲಿ ರೈತರು ಬೆಳೆಗಳಿಗೆ ನೀರು ಬಿಡಲು ಸಹಕಾರಿಯಾಗುತ್ತದೆ. 

ರೈತರು ವಿದ್ಯುತ್‌ ಸಮಸ್ಯೆ ಬಗ್ಗೆ ಹೇಳಿಕೊಂಡರೂ ಜೆಸ್ಕಾಂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳಿವೆ. ಈಗಲಾದರೂ ಪರಿಣಾಮಕಾರಿಯಾಗಿ ಸ್ಪಂದಿಸಿ ಎಂದು ಹೇಳಿದರು. ಪಿಎಂ ಫಸಲು ಬೀಮಾ ವ್ಯಾಪ್ತಿಗೆ ಎಲ್ಲ ರೈತರನ್ನು
ಸೇರಿಸಿ: ಪ್ರಕೃತಿ ವಿಕೋಪದಿಂದ ರೈತರ ಬೆಳೆ ನಷ್ಟವಾದಾಗ, ಇಳುವರಿ ಕಡಿಮೆಯಾದ ಸಂದರ್ಭದಲ್ಲಿ ಪರಿಹಾರ ಕಲ್ಪಿಸುವ ಪ್ರಧಾನ ಮಂತ್ರಿ ಫಸಲು ಬೀಮಾ ಯೋಜನೆಯಡಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಎಲ್ಲ ಹಳ್ಳಿಗಳ ಸರ್ವ ರೈತರನ್ನು ಒಳಪಡಿಸುವಂತೆ ಶಾಸಕರು ಕೃಷಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

Advertisement

ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬೆಳೆವಿಮೆ ಪ್ರಿಮಿಯಂ ಮೊದಲಿಗಿಂದ ಅರ್ಧದಷ್ಟು ಕಡಿಮೆಗೊಳಿಸಿ ರೈತರಿಗೆ ಅನುಕೂಲ ಮಾಡಿದೆ. ಹೀಗಾಗಿ ಎಲ್ಲ ರೈತರನ್ನು ವಿಮಾ ವ್ಯಾಪ್ತಿಗೆ ಒಳಪಡಿಸಬೇಕು. ಶೇ.40ರಷ್ಟು ಮಾತ್ರ ರೈತರು ಸಾಲ ಪಡೆದಿರುತ್ತಾರೆ. ಉಳಿದ ಶೇ. 60ರಷ್ಟು ರೈತರನ್ನು ವಿಮೆಗೆ ಒಳಪಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ತಾಪಂ ಅಧ್ಯಕ್ಷ ಶಿವರಾಜ ಸಜ್ಜನ, ಕಾರ್ಯನಿರ್ವಾಹಕ ಲಕ್ಷ್ಮಣ ಬಿ. ಶೃಂಗೇರಿ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next