ಮನವಿ ಮಾಡಿದ್ದ ರಾಜ್ಯ ಸರ್ಕಾರ, ಈಗ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿಯೂ ಭತ್ತ ಬೆಳೆಯದಂತೆ ಮನವಿ ಮಾಡಿದೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ
ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಕುರಿತ ಸಭೆಯಲ್ಲಿ, ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಭತ್ತದ ಬೆಳೆಗೆ ನೀರು ಕೊಡದಿರಲು ತೀರ್ಮಾನಿಸಿ ಮೆಕ್ಕೆಜೋಳ, ಶೇಂಗಾ ಮತ್ತಿತರ ಬೆಳೆ ಬೆಳೆಯುವಂತೆ ರೈತರಿಗೆ ಮನವಿ ಮಾಡಲು ನಿರ್ಧರಿಸಲಾಯಿತು. ಸಭೆಯ ನಂತರ ಸುದ್ದಿಗಾರ ಜತೆ ಮಾತನಾಡಿದ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಅಲ್ಪಾವಧಿ ಬೆಳೆ ಬೆಳೆಯಲು ಕಾಲುವೆಗಳಿಗೆ ನೀರು ಬಿಡುವ ಸಂಬಂಧ ಮುಂದಿನ ವಾರ ಸಲಹಾ ಸಮಿತಿ ಸಭೆ ಕರೆದು ನಿರ್ಧರಿಸಲಾಗುವುದು ಎಂದು ಹೇಳಿದರು.
Advertisement
ಜಲಾಶಯದಲ್ಲಿ ಪ್ರಸ್ತುತ ನಿರೀಕ್ಷಿತ ಪ್ರಮಾಣದಲ್ಲಿ ನೀರಿನ ಸಂಗ್ರಹ ಇಲ್ಲದ ಕಾರಣ ಭತ್ತ ಬೆಳೆಯಬಾರದು. ಕಡಿಮೆ ನೀರು ಬಳಸುವ ಅಲ್ಪಾವಧಿ ಬೆಳೆ ಬೆಳೆಯುವಂತೆ ಹಾಗೂ ನೀರಿನ ಮಿತ ಬಳಕೆಗೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕರಪತ್ರ ಮುದ್ರಿಸಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸಭೆಯಲ್ಲಿ ಸೂಚನೆ ನೀಡಿದರು. ಒಂದು ವಾರ ಜಲಾಶಯದ ನೀರಿನ ಸ್ಥಿತಿಗತಿ ಗಮನಿಸಿ ನೀರಾವರಿ ಸಲಹಾ ಸಮಿತಿ ಸಭೆ(ಐಸಿಸಿ) ನಡೆಸಿ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ತೀರ್ಮಾನ ಕೈಗೊಳ್ಳುವಂತೆ ನಿರ್ದೇಶನ ನೀಡಿದರು ಎಂದು ತಿಳಿಸಿದರು.
ಸಂಗ್ರಹವಾಗಿಲ್ಲ. ಲಭ್ಯವಿರುವ ನೀರನ್ನು ಮಿತವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ಭತ್ತ ಬೆಳೆಯಬಾರದು ಎಂಬುದನ್ನು ರೈತರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು. ಅಚ್ಚುಕಟ್ಟು ಪ್ರದೇಶದ ಸುಮಾರು 12.5 ಲಕ್ಷ ಎಕರೆ ಭತ್ತ ಸೇರಿದಂತೆ ಬೆಳೆಗೆ ನೀರು ಒದಗಿಸಲು ಕನಿಷ್ಟ 50 ಟಿಎಂಸಿ ನೀರಿನ ಅಗತ್ಯವಿದೆ. ಆದರೆ, ಈಗ ಜಲಾಶಯದಲ್ಲಿ 53 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಅದರಲ್ಲಿ ರಾಜ್ಯದ ಪಾಲು 34.50 ಟಿಎಂಸಿ ಮಾತ್ರ. 4 ಟಿಎಂಸಿ ಆವಿಯಾದರೆ, ಕುಡಿಯುವ ನೀರಿಗೆ 15 ಟಿಎಂಸಿ ಕಾಯ್ದಿರಿಸಬೇಕಿದೆ. ಕೃಷಿಗೆ 11.50 ಟಿಎಂಸಿ ಮಾತ್ರ ಲಭ್ಯವಾಗಲಿದೆ. ಹೀಗಾಗಿ, ರೈತರನ್ನು ಸಮಾಧಾನಪಡಿಸಲು ರಾಯಬಸವ ಮತ್ತು ವಿಜಯನಗರ ಕಾಲುವೆಗಳಿಗೆ 4 ಟಿಎಂಸಿ ನೀರು ಹರಿಸುವುದು ಸೂಕ್ತ ಎಂದು ಸಭೆ ಅಭಿಪ್ರಾಯಪಟ್ಟಿತು ಎಂದರು. ಸಭೆಯಲ್ಲಿ ಸಚಿವರಾದ ಬಸವರಾಜ ರಾಯರೆಡ್ಡಿ, ತನ್ವೀರ್ ಸೇs…, ಸಂಸದ ಕರಡಿ ಸಂಗಣ್ಣ , ಮೂರು ಜಿಲ್ಲೆಗಳ ಜನಪ್ರತಿನಿ ಗಳು ಹಾಗೂ ಜಲಸಂಪನ್ಮೂಲ ಅಧಿ
ಕಾರಿಗಳು ಉಪಸ್ಥಿತರಿದ್ದರು.