ಮಹಾನಗರ: ಮಂಗಳೂರಿಗೆ ಬೇಸಗೆ ಕಾಲದಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಗ ಳನ್ನು ಕೈಗೊಳ್ಳಬೇಕು. ಅಗತ್ಯವಾದರೆ ರೇಶ ನಿಂಗ್ ವ್ಯವಸ್ಥೆ ಮೂಲಕ ನೀರು ಸರಬರಾಜು ಮಾಡಬೇಕು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು ಜಿಲ್ಲಾಡಳಿತ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ ತುಂಬೆ ವೆಂಟೆಡ್ ಡ್ಯಾಂಗೆ ಭೇಟಿ ನೀಡಿದ ಅವರು ವೆಂಟೆಡ್ ಡ್ಯಾಂನ ನೀರಿನ ಸಂಗ್ರಹ ಕುರಿತಂತೆ ಮಾಹಿತಿ ಪಡೆದುಕೊಂಡರು.
ಈಗಿನ ವ್ಯವಸ್ಥೆಯಲ್ಲಿ ಅಣೆಕಟ್ಟಿನಲ್ಲಿ 6 ಮೀಟರ್ ಎತ್ತರಕ್ಕೆ ನೀರು ನಿಲ್ಲಿಸುವುದು ಸೂಕ್ತವಾಗಿದೆ.
ಇದೇ ಮಟ್ಟದಲ್ಲಿ ನೀರು ನಿಲ್ಲಿಸಿ, ಅಗತ್ಯ ಬಿದ್ದರೆ ರೇಶನಿಂಗ್ ವ್ಯವಸ್ಥೆ ಮೂಲಕ ನೀರು ಸರಬರಾಜು ಮಾಡಲು ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್, ಉಪ ಆಯುಕ್ತೆ ಗಾಯತ್ರಿ ನಾಯಕ್, ಪಾಲಿಕೆ ಅಧಿಕಾರಿಗಳಾದ ನರೇಶ್ ಶೆಣೈ, ಮಧು ಎಸ್. ಉಪಸ್ಥಿತರಿದ್ದರು. ಬಳಿಕ ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಯ ಬಗ್ಗೆ ನಗರದಲ್ಲಿ ಅಧಿಕಾರಿ ಗಳಿಂದ ಮಾಹಿತಿ ಪಡೆದ ಟಿ.ಎಂ. ವಿಜಯ ಭಾಸ್ಕರ್ ಅವರು ಕಂಟ್ರೋಲ್ ಕಮಾಂಡ್ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲಿಸಿದರು. ಸ್ಮಾರ್ಟ್ ಸಿಟಿ ಯೋಜನೆಗೆ ವೇಗ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.