Advertisement

Bhadra reservoir ನೀರು ಬಿಡುಗಡೆ; ನಾಲೆ, ನದಿ ದಂಡೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

02:45 PM Feb 20, 2024 | keerthan |

ಶಿವಮೊಗ್ಗ: ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಭದ್ರಾ ನಾಲೆ, ನದಿ ದಂಡೆ ವ್ಯಾಪ್ತಿಯಲ್ಲಿ 100 ಮೀ ವ್ಯಾಪ್ತಿಯಲ್ಲಿ ಫೆ.26ರವರೆಗೆ 144 ಸೆಕ್ಷನ್ ನಿಷೇ಼ಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

Advertisement

ಹಾವೇರಿ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ಭದ್ರಾ ಜಲಾಶಯದ ನೀರು ಹರಿಯುವ ನಾಲೆಗಳಿಗೆ ಕೆಲ ರೈತರು ಪಂಪ್ ಸೆಟ್ ಅಳವಡಿಸಿರುವ ಹಿನ್ನೆಲೆಯಲ್ಲಿ ಕೊನೆಯ ಭಾಗದ ರೈತರಿಗೆ, ಕುಡಿಯುವ ನೀರು ತಲುಪುತ್ತಿಲ್ಲ. ಹೀಗಾಗಿ ನದಿ ಮತ್ತು ಕಾಲುವೆಗಳ ಪ್ರದೇಶದಲ್ಲಿ ಅನಧಿಕೃತವಾಗಿ ರೈತರು ಹೊಲಗಳಿಗೆ ನೀರನ್ನು ಹರಿಸುವುದಾಗಲಿ ಅಥವಾ ಪಂಪ್ ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿದೆ. ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಬಂಧಿಸಿದೆ.

ನಿಷೇಧಾಜ್ಞೆ ಸಮಯದಲ್ಲಿ ಶಸ್ತ್ರ, ಬಡಿಗೆ, ಬರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಟಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದಂತಹ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಇಲ್ಲವೇ ಸ್ಫೋಟಕ ವಸ್ತುಗಳು, ಇತ್ಯಾದಿಗಳನ್ನು ತೆಗೆದುಕೊಂಡು ಓಡಾಡುವುದು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ:High Court: ನಿತ್ಯಾನಂದ ಪ್ರಪಂಚ ತ್ಯಜಿಸಿದ್ದಾರೆ: ಹೈಕೋರ್ಟ್‌ಗೆ ಸರ್ಕಾರ ಹೇಳಿಕೆ

ಬಹಿರಂಗವಾಗಿ ಘೋಷಣೆಗಳನ್ನು ಕೂಗುವುದು ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಮಾಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನಗಳನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next