Advertisement
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ನೇತೃತ್ವದಲ್ಲಿ ಹಸಿರು ಭೂಮಿ ಪ್ರತಿಷ್ಠಾನ ನಡೆಸಿದ ಜಲ ಸಂಕಷ್ಟದಿಂದ ಜಲ ಸಂಮೃದ್ಧಿಯಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾ.22 ರಂದು ವಿಶ್ವ ಜಲದಿನ ಮಾ.22 ರಂದು ವಿಶ್ವ ಭೂಮಿ ದಿನಾಚರಣೆಯನ್ನು ವಿನೂತನವಾಗಿ ಆಚರಿಸಬೇಕು ಎಂದು ಹೇಳಿದರು.
Related Articles
Advertisement
ಸರ್ಕಾರದ ಯೋಜನೆಗಳನ್ನು ಗುರಿ ಸಾಧನೆಗೆ ಮಾತ್ರ ಸೀಮಿತ ಮಾಡುತ್ತಿರುವುದರಿಂದ ಅಷ್ಟೊಂದು ಪರಿಣಾಮಕಾರಿಯಾಗಿ ಯೋಜನೆಗಳು ನಡೆಯುತ್ತಿಲ್ಲ. ಪ್ರತಿ ಮನೆಯಲ್ಲಿ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ನೀರಿನ ಬಜೆಟ್ ತಯಾರು ಮಾಡಿಕೊಳ್ಳುವುದು ಸೂಕ್ತ ಇದರಿಂದ ನೀರಿನ ಮಹತ್ವ ಪ್ರತಿಯೊಬ್ಬರಿಗೂ ತಿಳಿಯಲಿದೆ ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಸಿಇಒ ಮಹೇಶ್, ಯೋಜನಾಧಿಕಾರಿ ನಾಗರಾಜು, ಇಒ ಚಂದ್ರಶೇಖರ್, ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷ ಅಪ್ಪಾಜಿಗೌಡ, ಸಿ.ಎನ್.ಅಶೋಕ, ಗ್ರಾಮ ಪಂಚಾಯಿತಿ ಪಿಡಿಒ, ತಾಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಲ ಜಾಗೃತಿ ಮೂಡಿಸಲು ಕ್ರಮ: ಹಸಿರು ಭೂಮಿ ಪ್ರತಿಷ್ಠಾನ ಸಂಸ್ಥೆಯ ಸಂಸ್ಥಾಪಕಿ ರೂಪಾ ಹಾಸನ ಮಾತನಾಡಿ, ಮಾ.22 ರಿಂದ ಏ.22ರ ವರೆಗೆ ಒಂದು ತಿಂಗಳು ನಿರಂತರವಾಗಿ ಜಲದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಭೆ ನಡೆಸಿ ಜಲ ಸಂವರ್ಧನೆಗೆ ಯಾವ ರೀತಿಯಲ್ಲಿ ಕಾರ್ಯೋನ್ಮುಖರಾಗ ಬೇಕು ಎನ್ನುವು ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಲಾಗುತ್ತಿದೆ ಇದನ್ನು ನೋಡಿದ ಪಿಡಿಒಗಳು ಇಂದಿನಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದರು.
ಜಲ ಮರುಪೂರಣ ಮಾಡಿ: ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಸಾವಿರಾರು ಲೀ. ಲಕ್ಷಾಂತ ಲೀಟರ್ ನೀರನ್ನು ಚರಂಡಿಗೆ ಹರಿಸುತ್ತಿದ್ದೇವೆ. ಗ್ರಾಮಗಳಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಬಳಿ ನೀರಿಂಗಿಸುವ ಮೂಲಕ ಅಂತರ್ಜಲ ಮರುಪೂರಣ ಮಾಡುವ ಬಗ್ಗೆ ಪಿಡಿಒಗಳು ಕ್ರಮ ಕೈಗೊಳ್ಳಬೇಕು. ಇದಕ್ಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಂಜಿನಿಯರ್‌ಗಳು ಸಹಕಾರ ನೀಡಬೇಕು ಎಂದರು.