Advertisement

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

07:24 PM May 03, 2024 | Team Udayavani |

ಮಂಗಳೂರು: ತುಂಬೆಯಲ್ಲಿ ಜಲ ಮಟ್ಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಮೇ 5 ರಿಂದ ಮಂಗಳೂರು ನಗರದಲ್ಲಿ ಕುಡಿಯುವ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಅದರಂತೆ ನಗರಕ್ಕೆ ದಿನ ಬಿಟ್ಟು ದಿನ ನೀರು ಪೂರೈಕೆಯಾಗಲಿದೆ.

Advertisement

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಂಗಳೂರು ಪಾಲಿಕೆಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಲಭ್ಯವಿರುವ ನೀರನ್ನು ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ದಕ್ಷಿಣ) ಮತ್ತು ಸುರತ್ಕಲ್ ಪ್ರದೇಶಕ್ಕೆ (ಮಂಗಳೂರು ಉತ್ತರ) ಪರ್ಯಾಯ ದಿನಗಳಲ್ಲಿ ಕುಡಿಯುವ ನೀರು ಸರಬರಾಜುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗ ದಂತೆ ಅಗತ್ಯ ಕ್ರಮವಹಿಸಿ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿ, ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ ಈ ಕಾರಣ ನೀರನ್ನು ಅನಗತ್ಯವಾಗಿ ಪೊಲು ಮಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂ ದಂಡ ವಿಧಿಸಲಾಗುವುದು ಎಂದರು.

ಮಳೆಯ ಕೊರತೆ, ತಾಪಮಾನ ಹೆಚ್ಚಳದಿಂದಾಗಿ ನೀರಿನ ಸಮಸ್ಯೆ ಪ್ರಾರಂಭವಾಗುತ್ತಿದೆ. ಸಾರ್ವಜನಿಕರು ಅನಗತ್ಯವಾಗಿ ನೀರು ಪೊಲು ಮಾಡದೇ ಸದ್ಭಳಕೆ ಮಾಡಬೇಕು ಹಾಗೂ ನೀರಿನ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು. ಈಗಾಗಲೇ ನೀರಿನ ಸಮಸ್ಯೆ ಪರಿಹರಿಸುವ ಕಂಟ್ರೋಲ್ ರೂಮ್ ಗಳನ್ನು ತೆರೆಯಲಾಗಿದ್ದು, ಈ ಕಂಟ್ರೋಲ್ ರೂಮ್ ಗಳಿಗೆ ಸಾರ್ವಜನಿಕರಿಂದ ಬರುವಂತಹ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು, ನೀರಿನ ರೇಷನಿಂಗ್ ಮಾಡಲು ಸೂಕ್ತ ವೇಳಾಪಟ್ಟಿಯನ್ನು ತಯಾರಿಸಿ ಸಮರ್ಪಕವಾಗಿ ಎಲ್ಲಾ ಕಡೆ ನೀರು ಪೂರೈಕೆಯಾಗುವಂತೆ ನಿಗಾವಹಿಸಬೇಕು ಎಂದು ಪಾಲಿಕೆಯ ಆಯುಕ್ತರಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next