Advertisement
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೀರನವಾಡಿ, ಮಚ್ಛೆ, ಧಾಮಣೆ ಹಾಗೂ ಯಳ್ಳೂರು ಗ್ರಾಪಂ ವ್ಯಾಪ್ತಿಯ 15 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಇದಕ್ಕಾಗಿ ಖಾನಾಪುರದಿಂದ ನೀರು ಪೂರೈಸುವ ಯೋಜನೆಗಾಗಿ ಕರ್ನಾಟಕ ನೀರಾವರಿ ನಿಗಮದಿಂದ ಪ್ರಸ್ತಾವನೆಗೆ ಮಂಜೂರಾತಿ ಪಡೆಯಲಾಗುತ್ತಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ನಗರದಲ್ಲಿ ಹೆರಿಟೆಜ್ ಪಾರ್ಕ್ 3ನೇ ಹಂತದಲ್ಲಿ ಅಭಿವೃದ್ಧಿ ಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ನಗರದಲ್ಲಿ ಐಟಿ ಪಾರ್ಕ್ ನಿರ್ಮಾಣ ಹಾಗೂ ದೇಶಕ್ಕಾಗಿ ಹೋರಾಡಿದ ಮಹಾನ್ ನಾಯಕರ ರೆಪ್ಲಿಕಾ ಪಾರ್ಕ್ ನಿರ್ಮಾಣಕ್ಕಾಗಿ ವಿಧಾನಸಭೆ ಅಧಿವೇಶನದಲ್ಲಿ ಖಾಸಗಿ ನಿರ್ಣಯ ಮಂಡಿಸಿ ಸರ್ಕಾರದ ಗಮನಕ್ಕೆ ತರಲಾಗುವುದು. ಐಟಿ ಪಾರ್ಕ್ ನಿರ್ಮಾಣವಾದರೆ ಇಡೀ ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ಮಹತ್ವದ ಪಾತ್ರ ವಹಿಸಲಿದ್ದು, ಸುಮಾರು 40 ಸಾವಿರ ಜನರಿಗೆ ಉದ್ಯೋಗವಕಾಶ ಸಿಗಲಿದೆ ಎಂದು ವಿವರಿಸಿದರು.
Advertisement
15 ಹಳ್ಳಿಗಳಿಗೆ ಜಲಧಾರೆ ಯೋಜನೆ ನೀರು
12:05 PM May 15, 2019 | Suhan S |
Advertisement
Udayavani is now on Telegram. Click here to join our channel and stay updated with the latest news.