Advertisement
ಈ ಕುರಿತು ಮಾತನಾಡಿದ ಶಾಸಕ ಕಾಮತ್ ಅವರು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ಮನೆಗೂ ದಿನದ 24 ಗಂಟೆ ನೀರು ಸರಬರಾಜು ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ. ಅದರ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು, ವೆಲೆನ್ಸಿಯಾ, ಫಳ್ನೀರ್, ಬೆಂದೂರ್ ವಾರ್ಡ್ ಗಳಿಗೆ ನೀರು ಸರಬರಾಜು ಮಾಡುವ ಸಲುವಾಗಿ ಟ್ಯಾಂಕ್ ನಿರ್ಮಾಣಕ್ಕೆ 3.75 ಕೋ.ರೂ. ಅನುದಾನ ಮೀಸಲಿಡಲಾಗಿದೆ ಎಂದರು.
ಈ ಟ್ಯಾಂಕ್ 15 ಲಕ್ಷ ಲೀಟರ್ ಸಾಮರ್ಥ್ಯ ಹೊಂದಲಿದ್ದು, 1,538 ಮನೆಗಳಿಗೆ ಇಲ್ಲಿಂದ ನೀರು ಸರಬರಾಜು ಮಾಡಲಾಗುತ್ತದೆ. ಬೇಸಗೆಯ ಆರಂಭದಲ್ಲಿ ಕುಡಿಯುವ ನೀರಿನ ಅಭಾವ ಎದುರಿಸುವ ಮಂಗಳೂರಿಗೆ ಇದು ಬಹಳಷ್ಟು ಉಪಕಾರಿಯಾಗಲಿದೆ. ಟ್ಯಾಂಕ್ ನಿರ್ಮಾಣಕ್ಕೆ ಸ್ಥಳಾವಕಾಶ ಒದಗಿಸಿದ ವೆಲೆನ್ಸಿಯಾ ಚರ್ಚ್‌ನ ಧರ್ಮಗುರುಗಳಿಗೆ ಶಾಸಕರು ಕೃತಜ್ಞತೆ ಸಲ್ಲಿಸಿದರು.