Advertisement

30ರೊಳಗೆ ಕಾಲುವೆಗಳಿಗೆ ನೀರು: ಸಚಿವ ಕತ್ತಿ

05:47 PM Aug 16, 2022 | Shwetha M |

ಆಲಮಟ್ಟಿ: ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ನೀರು ಹರಿಸುವ ಪಂಪ್‌ಸೆಟ್‌ ಕೆಟ್ಟು ಹೋಗಿದ್ದು ಅವುಗಳ ದುರಸ್ತಿ ಕೆಲಸ ನಡೆದಿದೆ. ಅ. 30ರೊಳಗಾಗಿ 4 ಪಂಪ್‌ ಗಳಿಂದ ಕಾಲುವೆಗೆ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಹೇಳಿದರು.

Advertisement

ಸೋಮವಾರ ಆಲಮಟ್ಟಿಯಲ್ಲಿರುವ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾ ಭವನದಲ್ಲಿ ನಡೆದ ರೈತರು ಮತ್ತು ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಕಾಲುವೆಗಳಿಗೆ ನೀರು ಹರಿಸಲು ಒಟ್ಟು 8 ಪಂಪ್‌ಗ್ಳಿವೆ. ಅವುಗಳಲ್ಲಿ 7 ಕೆಟ್ಟಿದ್ದು ದುರಸ್ತಿಗಾಗಿ 7.75 ಕೋಟಿ ರೂ.ಗಳನ್ನು ಮೀಸಲಾಗಿರಿಸಲಾಗಿತ್ತು. ಆ. 15ರೊಳಗೆ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಕಾಲುವೆಗೆ ನೀರು ಹರಿಸಲು ಆರಂಭಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಅಗಷ್ಟ 30ರೊಳಗೆ 147ಕಿ. ಮೀ.ಉದ್ದವಿರುವ ಗುತ್ತಿಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆ ಕೊನೆಯಂಚಿನವರೆಗೂ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನುಳಿದ ಪಂಪ್‌ಗ್ಳನ್ನು ಕ್ರಮೇಣ ದುರಸ್ತಿಗೊಳಿಸಿ ರೈತರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದಕ್ಕೂ ಮೊದಲು ರೈತರು ಮತ್ತು ಅಧಿಕಾರಿಗಳ ಮಧ್ಯ ನಡೆದ ಸಭೆಯಲ್ಲಿ ಗುತ್ತಿ ಬಸವಣ್ಣ ಏತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಮಲ್ಲಯ್ಯ ಸಾರಂಗಮಠ ಅವರು ರೈತರಿಗಾಗುತ್ತಿರುವ ತೊಂದರೆ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು. ಶಾಂತ ಚಿತ್ತದಿಂದ ಆಲಿಸಿ ಜಿಲ್ಲಾ ಉಸ್ತುವಾರಿ ಮಂತ್ರಿ ಉಮೇಶ ಕತ್ತಿ, ಅಧಿಕಾರಿಗಳ ಸಮಸ್ಯೆ ಬಗ್ಗೆಯೂ ಆಲಿಸಿ ರೈತರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆಹರಿಸಲು ಸಮರೋಪಾದಿಯಲ್ಲಿ ಕ್ರಮಕ್ಕೆ ಸೂಚಿಸಿದರು.

Advertisement

ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದಕುಮಾರ ಅವರನ್ನು ಉದ್ದೇಶಿಸಿ ಕಾಲುವೆಗಳಿಂದ ಅಧಿಕೃತವಾಗಿ ನೀರೆತ್ತುವ ಪಂಪ್‌ ಮತ್ತು ಡೀಸೆಲ್‌ ಎಂಜಿನ್‌ಗಳನ್ನು ತೆರುವುಗೊಳಿಸಲು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳಿಗೆ ಸಹಕಾರ ನೀಡಲು ಆದೇಶಿಸಿದರು.

ಕಾಲುವೆಗಳಿಂದ ಅನಧಿಕೃತವಾಗಿ ನೀರೆತ್ತುವ ಎಲ್ಲ ವಿಧದ ಪಂಪ್‌ ಗಳನ್ನು ತೆರುವುಗೊಳಿಸಿ ಕಾಲುವೆಗಳ ಕೊನೆ ಅಂಚಿನವರೆಗೂ ನೀರು ತಲುಪುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್‌. ಶಿವಕುಮಾರ, ರಾಂಪುರ ವಲಯ ಮುಖ್ಯ ಅಭಿಯಂತರ ಎಸ್‌.ಡಿ.ನಾಯಕ, ಜಿಪಂ ಸಿಇಒ ರಾಹುಲ್‌ ಶಿಂಧೆ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ರಾಮ ಅರಸಿದ್ದಿ, ಆಲಮಟ್ಟಿ ವಲಯ ಮುಖ್ಯ ಅಭಿಯಂತರ ಎಚ್‌.ಸುರೇಶ, ಅಧೀಕ್ಷಕ ಅಭಿಯಂತರ ಡಿ.ಬಸವರಾಜ, ರೈತರಾದ ಮಲ್ಲಯ್ಯ ಸಾರಂಗಮಠ, ಮಹಾದೇವ ಮೂಲಿಮನಿ, ಮಲಕಣ್ಣ ನಾವದಗಿ, ಮಾಶಿಮ ವಾಲೀಕಾರ, ಸಿದ್ದಣ್ಣ ಕಿಣಗಿ, ಶಿವರಾಜ್‌ ಕಿಣಗಿ ಮೊದಲಾದವರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next