Advertisement

Wayanad Landslide: ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ ಹಕ್ಕುಚ್ಯುತಿ ನೋಟಿಸ್‌

01:34 AM Aug 03, 2024 | Team Udayavani |

ಹೊಸದಿಲ್ಲಿ: ವಯನಾಡ್‌ನ‌ಲ್ಲಿ ಭೂಕುಸಿತ ಕುರಿತು ಮೊದಲೇ ಎಚ್ಚರಿಕೆ ನೀಡಿದ್ದರೂ ಕೇರಳ ಸರಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಂಸತ್‌ನಲ್ಲಿ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಶುಕ್ರವಾರ ಕಾಂಗ್ರೆಸ್‌ ಹಕ್ಕುಚ್ಯುತಿ ನೋಟಿಸ್‌ ನೀಡಿದೆ. ಕಾಂಗ್ರೆಸ್‌ ಸಂಸದ ಜೈರಾಂ ರಮೇಶ್‌ ಅವರು ಹಕ್ಕುಚ್ಯುತಿ ನೋಟಿಸ್‌ ನೀಡಿದ್ದು, ಅದರಲ್ಲಿ ಅಮಿತ್‌ ಶಾ ಹೇಳಿಕೆಯನ್ನು ಅಲ್ಲಗಳೆಯಲಾಗಿದೆ. “ಮೊದಲೇ ಎಚ್ಚರಿಕೆ ನೀಡಲಾಗಿತ್ತು ಎಂದು ಅಮಿತ್‌ ಶಾ ಅವರು ಸುಳ್ಳು ಹೇಳಿರುವುದು ಸ್ಪಷ್ಟವಾಗಿದೆ. ಸಚಿವರು ಅಥವಾ ಸದನದ ಸದಸ್ಯರು ಸುಳ್ಳು ಹೇಳಿ ಸದನದ ಹಾದಿತಪ್ಪಿಸುವುದು ವಿಶೇಷಾಧಿಕಾರದ ಉಲ್ಲಂಘನೆ ಮತ್ತು ಸದನಕ್ಕೆ ಮಾಡಿದ ನಿಂದನೆ ಎಂದು ಪರಿಗಣಿಸಲ್ಪಡುತ್ತದೆ’ ಎಂದು ಹಕ್ಕುಚ್ಯುತಿ ನೋಟಿಸ್‌ನಲ್ಲಿ ಉಲ್ಲೇಖೀಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next