Advertisement
ರಾಜ್ಯದ ಗಡಿಜಿಲ್ಲೆಯೂ ಆಗಿರುವ ದೇಶದ ಯಾವುದೇ ಭಾಗದಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಪರಸ್ಪರ ನೆರವಿಗೆ ನಿಲ್ಲಬೇಕಿದ್ದು ನಮ್ಮ ಕರ್ತವ್ಯ ಎಂದು ಭಾವಿಸಿದ್ದೇನೆ. ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಮಾನವೀಯ ನೆಲೆಯಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎನ್ ಡಿ ಆರ್ ಎಫ್, ಸೇನಾ ಪಡೆಯ ತಂಡ ರವಾನೆ:
ಸಂತ್ರಸ್ತರ ಪ್ರಾಣ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳ ತ್ವರಿತವಾಗಿ ರವಾನಿಸಲಾಗಿದೆ. ಈ ತಂಡಗಳ ಜೊತೆಗೆ ಅಗತ್ಯ ಉಪಕರಣಗಳು ಮತ್ತು ಪರಿಹಾರ ಸಾಮಗ್ರಿಗಳ ರವಾನೆ ಮಾಡಲು ನೆರವು ನೀಡಲಾಗಿದೆ. ರಕ್ಷಣಾ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಎನ್ ಡಿ ಆರ್ ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್ ಕಾರಿಡಾರ್ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ, ಕ್ರೇನ್ ಮತ್ತಿತರ ಭಾರೀ ವಾಹನಗಳ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಒದಗಿಸಲಿದೆ.
Related Articles
Advertisement
ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ. ಚಾಮರಾಜ ನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆಗಳು:08226 223163
08226 223161
08226 223160
ವಾಟ್ಸಾಪ್ ಸಂಖ್ಯೆ: 9740942901