Advertisement

ರಾಮನ ಬಗ್ಗೆ ನಮಗೂ ಗೌರವವಿದೆ: ಸಿಎಂ

12:22 AM Jan 12, 2024 | Team Udayavani |

ಬೆಂಗಳೂರು: ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ಪಕ್ಷದ ತೀರ್ಮಾನವೇ ನಮ್ಮದು. ನಾವ್ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾವೆಲ್ಲರೂ ರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧ ಇಲ್ಲ. ರಾಮನನ್ನು ನಾವೂ ಗೌರವಿಸುತ್ತೇವೆ, ಪೂಜಿಸುತ್ತೇವೆ, ಭಜನೆ ಮಾಡುತ್ತೇವೆ. ರಾಮ ಮಂದಿರವನ್ನೂ ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ ಎಂದರು.

ದೇವಸ್ಥಾನಗಳಲ್ಲಿ ಪೂಜೆಗೆ ಸೂಚಿಸಿಲ್ಲ
ಸರಕಾರದಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ನಾನು ಸೂಚಿಸಿಲ್ಲ. ಮುಜರಾಯಿ ಇಲಾಖೆಯದ್ದು ನನಗೆ ಗೊತ್ತಿಲ್ಲ. ಬಿಜೆಪಿಯವರು ಅಯೋಧ್ಯೆಗೆ ಯಾಕೆ ಹೋಗುತ್ತಾರೆ? ಶ್ರೀ ರಾಮಚಂದ್ರ ಇಲ್ಲಿ ಇಲ್ಲವೇ? ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಇಲ್ಲಿಯೂ ಪೂಜೆ ನಡೆಯಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next