Advertisement
ಬಿಜೆಪಿ ಜತೆಗಿನ ಮೈತ್ರಿ ಬಳಿಕ ಜೆಡಿಎಸ್ ಪಾಳಯದಲ್ಲಿ ನಡೆಯುತ್ತಿರುವ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಜಿಲ್ಲಾಧ್ಯಕ್ಷರು ಸಹಿತ ಪ್ರಮುಖರ ಸಭೆಯನ್ನು ಎಚ್. ಡಿ.ಕುಮಾರಸ್ವಾಮಿ ತಮ್ಮ ತೋಟದ ಮನೆಯಲ್ಲಿ ಕರೆದಿದ್ದರು.
Related Articles
ಸಭೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸದಸ್ಯ ಜಿ.ಟಿ.ದೇವೇಗೌಡರು ಪಕ್ಷದ ಎಲ್ಲ ಶಾಸಕರು ಮತ್ತು ಮುಖಂಡರಿಂದ ಪ್ರಮಾಣ ಮಾಡಿಸಿದರು. ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಶಾಸಕರಾದ ಸಮೃದ್ಧಿ ಮಂಜುನಾಥ್, ಮಾಜಿ ಶಾಸಕರಾದ ಗುರು ಪಾಟೀಲ್, ರಾಜಾ ವೆಂಕಟಪ್ಪ ನಾಯಕ ಮುಂತಾದವರು ಮಾತನಾಡಿದರು.
Advertisement
ಎದ್ದು ಕಾಣುತ್ತಿದ್ದ ಇಬ್ರಾಹಿಂ ಗೈರುಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಗೈರಾಗಿದ್ದುದು ಎದ್ದುಕಾಣುತಿತ್ತು. ಕೆಲವು ದಿನಗಳ ಹಿಂದಷ್ಟೇ ಎಲ್ಲರನ್ನು ಹೊರಗಿಟ್ಟು ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಇಬ್ರಾಹಿಂ ಮಾಧ್ಯಮಗಳ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು. ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಮುಖಂಡರು ಗೈರಾಗಿದ್ದರು. ಪಕ್ಷ ಬಿಡಲಾರೆ: ಫಾರೂಕ್
ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಮಾತನಾಡಿ, ಅಲ್ಪಸಂಖ್ಯಾಕರಾದ ನಾವು ನಮ್ಮ ಆಚಾರ ವಿಚಾರ, ಆಹಾರ ಪದ್ಧತಿ ಇತ್ಯಾದಿಗಳಿಂದ ಕೆಲವು ಸಮಸ್ಯೆ ಎದುರಿಸುತ್ತಿದ್ದೇವೆ. ಆ ವಿಷಯದಲ್ಲಿ ಪಕ್ಷ ನಮ್ಮ ಜತೆ ನಿಂತಿದೆ. ಯಾರೇ ಪಕ್ಷ ಬಿಟ್ಟರೂ ನಾನು ಪಕ್ಷ ಬಿಡಲ್ಲ. ಇಪ್ಪತ್ತು ತಿಂಗಳ ಬಿಜೆಪಿ ಜೆಡಿಎಸ್ ಮೈತ್ರಿ ಸರಕಾರದ ಕಾಲದಲ್ಲಿ ಅಲ್ಪಸಂಖ್ಯಾಕರಿಗೆ ಏನಾ
ದರೂ ತೊಂದರೆ ಆಗಿದೆಯಾ ಎಂದು ಪ್ರಶ್ನಿಸಿದರು. ಅಲ್ಪಸಂಖ್ಯಾಕರು ಪಕ್ಷ ಬಿಡುತ್ತಿಲ್ಲ
ಪಕ್ಷದ ಅಲ್ಪಸಂಖ್ಯಾಕ ವಿಭಾಗದ ಉಪಾಧ್ಯಕ್ಷ ಇಮ್ತಿಯಾಜ್ ರಫೀಕ್ ಮಾತನಾಡಿ, ನಾವು ಪಕ್ಷಕ್ಕೆ ನಿಷ್ಠರಾಗಿದೇವೆ. ಅಲ್ಪಸಂಖ್ಯಾಕರ್ಯಾರೂ ಪಕ್ಷ ಬಿಟ್ಟು ಹೋಗಿಲ್ಲ. ಪಕ್ಷ ಮತ್ತು ವರಿಷ್ಠರು ಕೈಗೊಂಡ ನಿರ್ಧಾರಕ್ಕೆ ನಾವು ಬದ್ಧವಾಗಿದ್ದೇವೆ ಎಂದು ಹೇಳಿದರು. ಡಿಕೆಶಿ ವಿರುದ್ದ ದೇವೇಗೌಡ ಕಿಡಿ
ಡಿ. ಕೆ. ಶಿವಕುಮಾರ್ ಅವರ ಕೆಟ್ಟ ರಾಜಕೀಯ ಆಟ ನನ್ನ ಬಳಿ ನಡೆಯದು. ಅದು ನಿಮಗೆ ಗೊತ್ತಿರಲಿ, ನಮ್ಮ ಪಕ್ಷವನ್ನು ಏನು ಮಾಡಲು ಸಾಧ್ಯವಿಲ್ಲ. ಆ ವ್ಯಕ್ತಿಗೆ ಉತ್ತರ ಕೊಡಬೇಕು, ಕೊಡುವ ಕೆಲಸ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಗುಡುಗಿದರು. ಪಕ್ಷ ಸಂಘಟನೆ ನಿಟ್ಟಿನಲ್ಲಿ ವಿಚಾರ ವಿನಿಮಯ ಮಾಡಿಕೊಳ್ಳಲು ನಡೆದ ಸಭೆ ಇದಾಗಿದೆ. ಯಾವುದೇ ಅಲ್ಪಸಂಖ್ಯಾಕ ಮುಖಂಡರು ಮೈತ್ರಿಯನ್ನು ವಿರೋಧಿಸಿಲ್ಲ. ಪಕ್ಷದ ಯಾವುದೇ ಶಾಸಕರು, ಮುಖಂಡರು ಕಾಂಗ್ರೆಸ್ ಸೇರುವುದಿಲ್ಲ. ಇಬ್ರಾಹಿಂ ಜತೆ ಮಾತನಾಡಿ ಅವರಿಗೆ ವಾಸ್ತವ ಸ್ಥಿತಿ ಬಗ್ಗೆ ಮನವರಿಕೆ ಮಾಡಲಾಗುವುದು.
-ಜಿ.ಟಿ.ದೇವೇಗೌಡ, ಜೆಡಿಎಸ್ ಕೋರ್‌ಕಮಿಟಿ ಅಧ್ಯಕ್ಷ ದೇಶದಲ್ಲಿ ನಿಜವಾದ ಸೆಕ್ಯುಲರ್ ಎಂದು ಇದ್ದರೆ ಅದು ದೇವೇ ಗೌಡರು ಮಾತ್ರ. ಕಟ್ಟಾ ಆರೆಸ್ಸೆಸ್ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡು ನಾವು ಸೆಕ್ಯುಲರ್ ಎನ್ನುವುದು ಹಾಸ್ಯಾಸ್ಪದ. ಕುಮಾರ ಸ್ವಾಮಿ ಬಿಜೆಪಿ ಜತೆ ಸೇರಿ ಸರಕಾರ ರಚಿಸಿದ್ದಾಗ ಬಿಜೆಪಿ ರಾಜ್ಯಾ ಧ್ಯಕ್ಷ ರನ್ನೇ ಬಂಧಿಸಿದ್ದರು. -ವೈ.ಎಸ್.ವಿ ದತ್ತಾ, ಮಾಜಿ ಶಾಸಕ ಜ್ವಲಂತ ಸಮಸ್ಯೆ ಪರಿಹರಿಸದಿದ್ದರೆ ರಾಜಕೀಯ ನಿವೃತ್ತಿ: ಎಚ್‌ಡಿಕೆ
ಬೆಂಗಳೂರು: ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಜೆಡಿಎಸ್-ಬಿಜೆಪಿ ಮೈತ್ರಿ ಪರಿಹಾರವಾಗಿದೆ. ಮುಂದಿನ ಐದು ವರ್ಷಗಳಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಪಡೆಯದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆಂದು ಎಚ್. ಡಿ.ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ಮುಖಂಡರ ಸಭೆ ಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಕೇಂದ್ರ ಸರಕಾರದ ನೆರವಿನಿಂದ ಎಲ್ಲ ಸಮಸ್ಯೆ, ಯೋಜನೆಗಳಿಗೆ ಪರಿಹಾರ ಮಾಡಿಸುತ್ತೇನೆ. ಒಂದು ವೇಳೆ ಮಾಡಿ ಸದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು. ನಮ್ಮ ನೀರನ್ನು ಉಳಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೇನೆ. ಕಾಂಗ್ರೆಸ್‌ನವರಂತೆ ಸುಳ್ಳು ಹೇಳುವುದಿಲ್ಲ. ದೇವೇಗೌಡರ ಮಾರ್ಗದರ್ಶನದಲ್ಲಿ ಈ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.