ಬೆಳಗಾವಿ: ಜಗತ್ತಿಗೆ ಅನರ್ಹರ ಶಾಸಕರು ಯಾಕೇ ರಾಜೀನಾಮೆ ಕೊಟ್ಟಿದ್ದಾರೆ ಅನ್ನುವುದು ಗೊತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅವ್ಯವಸ್ಥೆ, ಗೌರವ ಕೊಡದ ಬಗ್ಗೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂದು ವಸತಿ ಸಚಿವ ಸೋಮಣ್ಣ ಹೇಳಿದರು.
ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅನರ್ಹ ಶಾಸಕರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗಂತ ನಾವು ಅನರ್ಹ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದೇವೆ ಎಂದು ಹೇಳಿಲ್ಲ. ಕಾಂಗ್ರೆಸ್ ಪಕ್ಷ ದವರು ವಿನಾಕಾರಣ ಗೊಂದಲ ಹುಟ್ಟುಹಾಕುತ್ತಿದ್ದಾರೆ ಎಂದರು. ಅನರ್ಹ ಶಾಸಕರ ವಿಷಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಕೊಟ್ಟ ಕುದುರೆಯನ್ನು ಏರದವನು ವೀರನು ಅಲ್ಲಾ..ಧೀರನು ಅಲ್ಲ. ಇದು ವಿರೋಧ ಪಕ್ಷದವರಿಗೆ ಅನ್ವಯವಾಗುತ್ತದೆ.ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ತಮ್ಮ ಶಾಸಕರನ್ನು ಸರಿಯಾಗಿ ಇಟ್ಟುಕೊಳ್ಳಲು ಆಗಲಿಲ್ಲ ಎಂದು ಟಾಂಗ್ ಕೊಟ್ಟರು.
ಅನರ್ಹ ಶಾಸಕರು ಹಾಗೂ ಅವರ ತೀರ್ಮಾನದ ಬಗ್ಗೆ ನಮಗೆ ಗೌರವ ಇದೆ ,ಬಿಎಸ್ ವೈ ಸರ್ಕಾರ ಬೀಳಲಿದೆ ಎಂದು ಕಾಂಗ್ರೆಸ್ ಹೇಳಿಕೆ ನೀಡುತ್ತಿರುವುದು ಹಾಗೂ ಜೆಡಿಎಸ್ ಬಿಜೆಪಿ ಗೆ ಬೆಂಬಲಿಸುವ ವಿಚಾರದ ಬಗ್ಗೆ ಮಾತಾನಾಡಿದ ಅವರು ಸೋಮಣ್ಣ ಕಾಂಗ್ರೆಸ್, ಜೆಡಿಎಸ್ ಹೇಳಿಕೆಗಳು ತೋಳ ಕುರಿಮರಿ ಕಥೆ ಆಗಿದೆ. ಬಿಎಸವೈ ಸರ್ಕಾರ ಸುಭದ್ರವಾಗಿ ಇರಲಿದೆ. ಪೂರ್ಣಾವಧಿಯ ಆಡಳಿತ ನೀಡಲಿದೆ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು.
ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿದ್ದಾಗ ವೈರಾಗ್ಯದ ಮಾತುಗಳು ಆಡಿದ್ದಾರೆ ಮಹದಾಯಿ ವಿವಾದ ಕಾನೂನು ಚೌಕಟ್ಟಿನಲ್ಲಿ ಪರಿಹರಿಸುವ ಕೆಲಸ ಆಗುತ್ತಿದೆ. ಈ ವಿಚಾರದಲ್ಲಿ ಸಿಎಂ ಹೆಚ್ಚಿನ ಒತ್ತು ನೀಡುವ ಮೂಲಕ ಬದ್ಧತೆ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಹೇಳಿದರು.